ಕೋಲಾರ: ಜಿಲ್ಲೆಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಮಕ್ಕಳನ್ನು ಮಲದ ಗುಂಡಿಗೆ ಸ್ವಚ್ಛತೆಗಾಗಿ ಇಳಿಸಿರುವ ಘಟನೆ ನಡೆದಿದೆ.
ಪ್ರಾಂಶುಪಾಲ, ಶಿಕ್ಷಕರ ಎದುರಲ್ಲಿಯೇ ಈ ಕಾರ್ಯ ನಡೆದಿದೆ. ಮಾಲೂರು ತಾಲ್ಲೂಕಿನ ಯಲವಳ್ಳಿ ಗ್ರಾಮದ ಹತ್ತಿರ ಇರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಪ್ರಾಂಶುಪಾಲರ ಎದುರಲ್ಲೇ ಸಿಬ್ಬಂದಿ, ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛ ಮಾಡಿಸಿದ್ದಾರೆ.
ಈ ಅಮಾನವೀಯ ಕೃತ್ಯದ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಲೆಯಲ್ಲಿ ಸುಮಾರು 250 ಮಕ್ಕಳಿದ್ದಾರೆ. ಮಕ್ಕಳಿಗೆ ಕಿರುಕುಳ ನೀಡಿರುವ ಶಿಕ್ಷಕರ ವಿರುದ್ಧ ಕ್ರಮಕ್ಕೆ ಪೋಷಕರು ಆಗ್ರಹಿಸಿದ್ದಾರೆ.
ಈ ಕುರಿತು ಮಾತನಾಡಿರುವ ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ, ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆದೇಶಿಸಲಾಗಿದೆ.