ರಾಜ್ಕೋಟ್: ಇಂಗ್ಲೆಂಡ್ ವಿರುದ್ಧ ಇಲ್ಲಿ ನಡೆಯಲಿರುವ 3ನೇ ಟೆಸ್ಟ್ ಗೆ ಭಾರತ ತಂಡ ಆಯ್ಕೆ ಮಾಡಿದ್ದು, ಮತ್ತೆ ಕೆ.ಎಲ್. ರಾಹುಲ್ ಹೊರಗೆ ಉಳಿದಿದ್ದು, ಜಡೇಜಾ ತಂಡ ಸೇರಿದ್ದಾರೆ.
ರಾಹುಲ್ ಬದಲಿಗೆ ಮತ್ತೊಬ್ಬ ಕನ್ನಡಿಗನಿಗೆ ಮಣೆ ಹಾಕಲಾಗಿದ್ದು, ದೇವದತ್ತ ಪಡಿಕಲ್ ಗೆ ಅವಕಾಶ ಸಿಕ್ಕಿದೆ. ರಾಹುಲ್ ಹಾಗೂ ರವೀಂದ್ರ ಜಡೇಜಾ ಅವರನ್ನು ಫಿಟ್ ನೆಸ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಜಡೇಜಾ ತಂಡ ಸೇರಲು ಗ್ರೀನ್ ಸಿಗ್ನಲ್ ಸಿಕ್ಕಿದ್ದು, ರಾಹುಲ್ ಪಂದ್ಯದಿಂದ ಹೊರಗೆ ಉಳಿದಿದ್ದಾರೆ ಎನ್ನಲಾಗಿದೆ.
ವಿರಾಟ್ ಕೊಹ್ಲಿ ಅನುಪಸ್ಥಿತಿಯಿಂದ ಭಾರತಕ್ಕೆ ಟೀಂ ಇಂಡಿಯಾಕ್ಕೆ ಬ್ಯಾಟಿಂಗ್ ಬಲದ ಕೊರತೆಯಾಗಿದೆ. ಕೆ.ಎಲ್ ರಾಹುಲ್ ಕೂಡ ವರು ಹೈದರಾಬಾದ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ವೇಳೆ ಬಲತೋಡೆಯ ಸ್ನಾಯು ಸೆಳೆತದಿಂದ ಬಳಲುತ್ತಿದ್ದರು. ಈಗ ಅವರೂ ಸಂಪೂರ್ಣ ಫಿಟ್ ಆಗಿಲ್ಲ. ಹೀಗಾಗಿ ಒಂದು ವಾರಗಳ ಕಾಲ ವೈದ್ಯಕೀಯ ಮೇಲ್ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಬಿಸಿಸಿಐ ತಿಳಿಸಿದೆ.
ದೇವದತ್ ಪಡಿಕ್ಕಲ್ ಅವರಿಗೆ ಟೆಸ್ಟ್ ತಂಡದಲ್ಲಿ ಸ್ಥಾನ ನೀಡಲಾಗಿದೆ. ರಣಜಿ ಟ್ರೋಫಿಯಲ್ಲಿ ಆಡುತ್ತಿರುವ ದೇವದತ್ ಪಡಿಕಲ್ ಕರ್ನಾಟಕದ ಪರ ಅದ್ಭುತ ಪ್ರದರ್ಶನ ನೀಡಿದ್ದಾರೆ. ಪಂಜಾಬ್ ವಿರುದ್ಧ ನಡೆದ ಪಂದ್ಯದಲ್ಲಿ 193 ರನ್ ಗಳಿಸಿ ಮಿಂಚಿದ್ದರು. ಅಲ್ಲದೇ ಇಂಗ್ಲೆಂಡ್ ಲಯನ್ಸ್ ವಿರುದ್ಧ ನಡೆದ ಎರಡು ಟೆಸ್ಟ್ ಪಂದ್ಯದ ಮೂರು ಇನ್ನಿಂಗ್ಸ್ಗಳಲ್ಲಿ ಭಾರತ ಎ ತಂಡದ ಪರ ಕ್ರಮವಾಗಿ 105, 65 ಮತ್ತು 21 ರನ್ ಗಳಿಸಿ ಭರ್ಜರಿ ಪ್ರದರ್ಶನ ತೋರಿದ್ದರು.