ಆಫ್ರಿಕಾ ವಿರುದ್ಧ ಏಕದಿನ ಸರಣಿ | ರಾಹುಲ್ ನಾಯಕ, ರುತುರಾಜ್ ಗೆ ಚಾನ್ಸ್ Team India
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟವಾಗಿದೆ. ಕನ್ನಡಿಗ ಕೆ.ಎಲ್ ರಾಹುಲ್ ಗೆ ಅದೃಷ್ಠ ಖುಲಾಯಿಸಿದ್ದು, ಆಫ್ರಿಕಾ ನೆಲದಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಸೀಮಿತ ಓವರ್ ಗಳ ನಾಯಕ ರೋಹಿತ್ ಶರ್ಮಾ, ಫಿಟ್ನೆನ್ಸ್ ಕೊರತೆಯಿಂದ ಸರಣಿಯಿಂದ ದೂರ ಉಳಿದಿದ್ದಾರೆ. ಹೀಗಾಗಿ ಅವರ ಬದಲಿಗೆ ಕೆ.ಎಲ್.ರಾಹುಲ್ ಅವರನ್ನು ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಬಿಸಿಸಿಐ ಪ್ರಕಟಿಸಿದ 20 ಸದಸ್ಯರ ತಂಡದಲ್ಲಿ ಐಪಿಎಲ್ 2021 ರ ದೇಶೀಯ ತಾರೆಗಳಾದ ವೆಂಕಟೇಶ್ ಅಯ್ಯರ್, ರುತುರಾಜ್ ಗಾಯಕ್ವಾಡ್ ಮತ್ತು ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಸೇರಿದ್ದಾರೆ.
https://twitter.com/BCCI/status/1476932067703156744?s=20
ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಭಾರತ ಏಕದಿನ ತಂಡ: ಕೆಎಲ್ ರಾಹುಲ್ (ನಾಯಕ), ಶಿಖರ್ ಧವನ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ರಿಷಬ್ ಪಂತ್ (ವಿಕೆಟ್ ಕೀಪರ್), ಇಶಾಂತ್ ಕಿಶನ್, ವಿಕೆಟ್, (ವಿಕೆಟ್); ಸುಂದರ್, ಬುಮ್ರಾ (ಉಪನಾಯಕ), ಭುವನೇಶ್ವರ್ ಕುಮಾರ್, ದೀಪಕ್ ಚಹಾರ್,ಪ್ರಸಿದ್ಧ್ ಕೃಷ್ಣ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್








