ಟೀಮ್ ಇಂಡಿಯಾದ ಮುಖ್ಯ ಕೋಚ್ ರವಿ ಶಾಸ್ತ್ರಿ ಅವರಿಗೆ ಕೊರೊನಾ..!
ಲಂಡನ್ : ಟೀಮ್ ಇಂಡಿಯಾದ ಮುಖ್ಯ ಕೋಚ್ ರವಿ ಶಾಸ್ತ್ರಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಹೀಗಾಗಿ ರವಿ ಶಾಸ್ತ್ರಿ ಸೇರಿದಂತೆ ನಾಲ್ವರನ್ನ ಐಸೋಲೇಷನ್ ನಲ್ಲಿ ಇರಿಸಲಾಗಿದೆ. ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದ 4ನೇ ದಿನದ ಆಟ ಇಂದು ಆರಂಭವಾಗಿದೆ. ಭಾರತ ಎರಡನೇ ಇನ್ನಿಂಗ್ಸ್ ಆರಂಭಿಸಿದೆ. ಈ ಮಧ್ಯೆ ಟೀಂ ಇಂಡಿಯಾ ಮುಖ್ಯ ಕೋಚ್ ರವಿಶಾಸ್ತ್ರಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ರವಿ ಶಾಸ್ತ್ರಿ ಅವರ ಜೊತೆಗೆ ಬೌಲಿಂಗ್ ಕೋಚ್ ಭರತ್ ಅರುಣ್, ಫೀಲ್ಡಿಂಗ್ ಕೋಚ್ ಆರ್.ಶ್ರೀಧರ್, ಫಿಸಿಯೋಥೆರಪಿಸ್ಟ್ ನಿತಿನ್ ಪಟೇಲ್ ಅವರನ್ನೂ ಐಸೋಲೇಶನ್ ಗೆ ಒಳಪಡಿಸಲಾಗಿದೆ.
ಬ್ಯಾಟ್ಸ್ ಮೆನ್ಸ್ ಕೆಚ್ಚೆದೆಯ ಪ್ರದರ್ಶನ : 4ನೇ ಟೆಸ್ಟ್ ನಲ್ಲಿ ಭಾರತ ಜಬರ್ದಸ್ತ್ ಆಟ..!
ಇವರೆಲ್ಲರೂ ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಗಾಗಿದ್ದಾರೆ. ಸದ್ಯ ತಂಡದ ಹೋಟೆಲ್‌ನಲ್ಲಿಯೇ ಉಳಿದುಕೊಂಡಿದ್ದಾರೆ. ವೈದ್ಯಕೀಯ ತಂಡ ದೃಢೀಕರಿಸುವವರೆಗೂ ಟೀಮ್ ಇಂಡಿಯಾದೊಂದಿಗೆ ಪ್ರಯಾಣಿಸುವಂತಿಲ್ಲ ಎಂದು ಬಿಸಿಸಿಐ ಹೇಳಿದೆ. ತಂಡದ ಉಳಿದ ಸದಸ್ಯರಿಗೂ ಪರೀಕ್ಷೆ ನಡೆಸಲಾಗಿದೆ. ಶನಿವಾರ ರಾತ್ರಿ ಮತ್ತು ಭಾನುವಾರ ಬೆಳಗ್ಗೆ ಎಲ್ಲಾ ಆಟಗಾರರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ನೆಗೆಟಿವ್ ವರದಿ ಬಂದ ಹಿನ್ನೆಲೆಯಲ್ಲಿ ನಾಲ್ಕನೇ ದಿನದಾಟಕ್ಕೆ ಅವಕಾಶ ಕೊಡಲಾಗಿದೆ.