Team India : ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಗೆ ಶುಭ್ಮನ್ ನಾಮ ನಿರ್ದೇಶನ
ಪ್ರಸಕ್ತ ವರ್ಷದಲ್ಲಿ ಪ್ರವಾಸಿ ಶ್ರೀಲಂಕಾ ಹಾಗೂ ನ್ಯೂಜಿ಼ಲೆಂಡ್ ವಿರುದ್ಧದ ಸರಣಿಯಲ್ಲಿ ಭರ್ಜರಿ ಫಾರ್ಮ್ ಮೂಲಕ ಮಿಂಚಿರುವ ಭಾರತದ ಯುವ ಆರಂಭಿಕ ಬ್ಯಾಟ್ಸ್‌ಮನ್ ಶುಭ್ಮನ್ ಗಿಲ್ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಗೆ ನಾಮಿನೇಟ್ ಆಗಿದ್ದಾರೆ.
ODI ಹಾಗೂ T20I ಕ್ರಿಕೆಟ್‌ನಲ್ಲಿ ಶುಭ್ಮನ್ ಗಿಲ್ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ಅಬ್ಬರಿಸಿರುವ ಗಿಲ್, 113.40ರ ಬ್ಯಾಟಿಂಗ್ ಸರಾಸರಿಯಲ್ಲಿ 567 ರನ್‌ಗಳಿಸಿದ್ದರೆ. ಟಿ20 ಕ್ರಿಕೆಟ್‌ನಲ್ಲಿ 76 ರನ್‌ಗಳಿಸಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ಕಿವೀಸ್ ವಿರುದ್ಧದ ODI ಸರರಣಿಯಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ಓಪನರ್, ಡಬಲ್ ಸೆಂಚುರಿ ಬಾರಿಸುವ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ ದ್ವಿಶತಕ ಬಾರಿಸಿದ 8ನೇ ಆಟಗಾರ ಎನಿಸಿದರು.
ಹೈದ್ರಾಬಾದ್‌ನಲ್ಲಿ ನಡೆದ ಪಂದ್ಯದಲ್ಲಿ ಅಬ್ಬರದ ಆಟವಾಡಿದ ಶುಭ್ಮನ್ ಗಿಲ್, ಅಜೇಯ 208 ರನ್‌ಗಳಿಸಿದ್ದರು. ಅಲ್ಲದೇ ಜನವರಿ ತಿಂಗಳಲ್ಲಿ ಒಟ್ಟು ಎರಡು ಶತಕ ಹಾಗೂ ಒಂದು ದ್ವಿಶತಕ ಬಾರಿಸಿದ್ದರು. ಕಿವೀಸ್ ವಿರುದ್ಧದ ODI ಸರಣಿಯಲ್ಲಿ ಶುಭ್ಮನ್ ಗಿಲ್, ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು. ಈ ಹಿನ್ನೆಲೆಯಲ್ಲಿ ಆರಂಭಿಕ ಆಟಗಾರ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಗೆ ನಾಮಿನೇಟ್ ಆಗಿದ್ದಾರೆ.
ಟೀಂ ಇಂಡಿಯಾದ ಯುವ ಆರಂಭಿಕ ಬ್ಯಾಟ್ಸ್‌ಮನ್ ಶುಭ್ಮನ್ ಗಿಲ್ ಅವರೊಂದಿಗೆ ಭಾರತದ ಯುವ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಹಾಗೂ ನ್ಯೂಜಿ಼ಲೆಂಡ್‌ನ ಆರಂಭಿಕ ಬ್ಯಾಟ್ಸ್‌ಮನ್ ಡೆವೊನ್ ಕಾನ್ವೆ ಸಹ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಗೆ ನಾಮಿನೇಟ್ ಆಗಿದ್ದಾರೆ.
Team India , ICC Monthend Award , team india’s Shubhmangil got nominated








