ADVERTISEMENT
Monday, October 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮಯಾಂಕ್ ಗೆ ಚಾನ್ಸೇ ಕೊಡುತ್ತಿಲ್ಲ .. ಅವಕಾಶ ಕೈಚೆಲ್ಲಿಕೊಂಡ ಶುಬ್ಮನ್.. ಬಕ ಪಕ್ಷಿಯಂತೆ ಕಾಯುತ್ತಿರುವ ಪೃಥ್ವಿ ಶಾ..!

admin by admin
June 23, 2021
in Newsbeat, Sports, ಕ್ರೀಡೆ
mayank agarwal prithvi shaw shubman gill saakshatv team india
Share on FacebookShare on TwitterShare on WhatsappShare on Telegram

ಮಯಾಂಕ್ ಗೆ ಚಾನ್ಸೇ ಕೊಡುತ್ತಿಲ್ಲ.. ಅವಕಾಶ ಕೈಚೆಲ್ಲಿಕೊಂಡ ಶುಬ್ಮನ್.. ಬಕ ಪಕ್ಷಿಯಂತೆ ಕಾಯುತ್ತಿರುವ ಪೃಥ್ವಿ ಶಾ..!

shubman gill saakshatv team indiaಶುಬ್ಮನ್ ಗಿಲ್.. ಸಾಕಷ್ಟು ಭರವಸೆ ಮೂಡಿಸಿದ್ದ ಬ್ಯಾಟ್ಸ್ ಮೆನ್. ಟೀಮ್ ಇಂಡಿಯಾದ ಆರಂಭಿಕ ಸ್ಥಾನವನ್ನು ಭದ್ರಪಡಿಸಿಕೊಳ್ಳುತ್ತಾರೆ ಅನ್ನೋ ನಂಬಿಕೆ ಇತ್ತು. ಆದ್ರೆ ಶುಬ್ಮನ್ ಗಿಲ್ ಎಲ್ಲಾ ನಿರೀಕ್ಷೆ ಹಾಗೂ ಭರವಸೆಗಳನ್ನು ಹುಸಿಗೊಳಿಸಿದ್ದಾರೆ. ಸಿಕ್ಕ ಸಾಲು ಸಾಲು ಅವಕಾಶಗಳನ್ನು ಕೈಚೆಲ್ಲಿಕೊಳ್ಳುತ್ತಿದ್ದಾರೆ.
ಹೌದು, ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯದ ಎರಡೂ ಇನಿಂಗ್ಸ್ ಗಳಲ್ಲೂ ರನ್ ದಾಖಲಿಸಲು ಶುಭ್ಮನ್ ಗಿಲ್ ವಿಫಲವಾಗಿದ್ದಾರೆ. ಮೊದಲ ಇನಿಂಗ್ಸ್ ನಲ್ಲಿ 28 ರನ್ ಗಳಿಸಿದ್ರೆ, ಎರಡನೇ ಇನಿಂಗ್ಸ್ ನಲ್ಲಿ ಕೇವಲ 8 ರನ್ ಗೆ ತನ್ನ ಹೋರಾಟವನ್ನು ಕೊನೆಗೊಳಿಸಿದ್ದಾರೆ.
ಇಲ್ಲಿಯವರೆಗೆ ಶುಬ್ಮನ್ ಗಿಲ್ ಏಳು ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. 35ರ ಸರಾಸರಿಯಲ್ಲಿ ಗಳಿಸಿದ್ದು 378 ರನ್. ಇದ್ರಲ್ಲಿ ಮೂರು ಅರ್ಧಶತಕಗಳಿವೆ.
ಹಾಗಂತ ಶುಬ್ಮನ್ ಗಿಲ್ ಅವರ ಪ್ರತಿಭೆ ಸಾಮಥ್ರ್ಯವನ್ನು ಕೇವಲ ಏಳು ಟೆಸ್ಟ್ ಪಂದ್ಯಗಳಲ್ಲಿ ಅಳತೆ ಮಾಡುವುದು ಕೂಡ ಸರಿಯಲ್ಲ. ಆದ್ರೂ ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳುತ್ತಿಲ್ಲ. ಸ್ಪರ್ಧಾತ್ಮಕ ದಿನಗಳಲ್ಲಿ ಅವಕಾಶವನ್ನು ಕೈಚೆಲ್ಲಿದ್ರೆ ಮತ್ತೆ ತಂಡದಲ್ಲಿ ಸ್ಥಾನ ಸಿಗುತ್ತೊ ಇಲ್ವೋ ಗೊತ್ತಿಲ್ಲ.
ಇದಕ್ಕೆ ಪೃಥ್ವಿ ಶಾ ಅತ್ಯುತ್ತಮ ಉದಾಹರಣೆ. ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಶತಕ ದಾಖಲಿಸಿ ಗಮನ ಸೆಳೆದಿದ್ದ ಪೃಥ್ವಿ ಶಾ ಆನಂತರ ಗಾಯ, ಕಳಪೆ ಫಾರ್ಮ್ ನಿಂದಾಗಿ ಟೀಮ್ ಇಂಡಿಯಾದಿಂದ ಹೊರನಡೆದಿದ್ದರು. ಆಸ್ಟ್ರೇಲಿಯಾ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಶೂನ್ಯ ಮತ್ತು ನಾಲ್ಕು ರನ್ ಗಳಿಸಿದ್ದ ನಂತರ ಪೃಥ್ವಿ ಶಾ ತಂಡದಲ್ಲಿ ಸ್ಥಾನ ಪಡೆದುಕೊಂಡಿಲ್ಲ.

Related posts

ಬರ್ತೀನಿ ಬಿಡಿ ಅಂತ ಟೇಬಲ್ ಹೊಡೆದ್ರೆ ಈ ರಾಜ್ಯ ನಿಮ್ಮ ತಾತನ ಆಸ್ತಿನಾ?ಕಲ್ಯಾಣ ಕರ್ನಾಟಕದ ಮಣ್ಣಿನ ಜನ ಯಾವುದಕ್ಕೂ ಹೆದರುವುದಿಲ್ಲ ಬಗ್ಗುವುದೂ ಇಲ್ಲ. ಇಂತಹ ಹತ್ತಾರು ಜನರನ್ನು ನಾವು ನೋಡಿದ್ದೇವೆ: ಕುಮಾರಸ್ವಾಮಿ ವಿರುದ್ಧ ಶರಣಪ್ರಕಾಶ್ ಪಾಟೀಲ್ ಆಕ್ರೋಶ

October 18, 2026
ಮಹಾರಾಷ್ಟ್ರದಲ್ಲಿ ಅವಧಿ ಮೀರಿದ ಆಹಾರ ಉತ್ಪನ್ನಗಳ ಅಕ್ರಮ ಮಾರಾಟ ಜಾಲ ಪತ್ತೆ: ₹48 ಲಕ್ಷದ ಸರಕು ಜಪ್ತಿ, ರಿಲಯನ್ಸ್‌ ನಿರ್ದೇಶಕ ಸೇರಿ 10 ಜನರ ವಿರುದ್ಧ FIR

ಮಹಾರಾಷ್ಟ್ರದಲ್ಲಿ ಅವಧಿ ಮೀರಿದ ಆಹಾರ ಉತ್ಪನ್ನಗಳ ಅಕ್ರಮ ಮಾರಾಟ ಜಾಲ ಪತ್ತೆ: ₹48 ಲಕ್ಷದ ಸರಕು ಜಪ್ತಿ, ರಿಲಯನ್ಸ್‌ ನಿರ್ದೇಶಕ ಸೇರಿ 10 ಜನರ ವಿರುದ್ಧ FIR

October 18, 2026

prithvi shaw team india saakshatvಆದ್ರೆ ಆಸ್ಟ್ರೇಲಿಯಾ ಸರಣಿಯಿಂದ ಹೊರಬಿದ್ದ ಬಳಿಕ ಪೃಥ್ವಿ ಶಾ ದೇಶಿ ಟೂರ್ನಿಯಲ್ಲಿ ರನ್ ಮಳೆ ಸುರಿಸಿದ್ದರು. ಅದೇ ರೀತಿ ಐಪಿಎಲ್ ನಲ್ಲೂ ಅತ್ಯುತ್ತಮ ಪ್ರದರ್ಶನ ನೀಡಿದ್ದರು.. ಆದ್ರೂ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ. ಇದೀಗ ಪೃಥ್ವಿ ಶಾ ಅವರು ಅವಕಾಶಕ್ಕಾಗಿ ಕಾಯುತ್ತಿದ್ದಾರೆ. ಪೃಥ್ವಿ ಶಾ ಅವಕಾಶವನ್ನು ಕಸಿದುಕೊಂಡ ಶುಬ್ನನ್ ಗಿಲ್ ಕೂಡ ನಿರೀಕ್ಷಿತ ಮಟ್ಟದ ಪ್ರದರ್ಶನ ನೀಡಿಲ್ಲ. ಹೀಗಾಗಿ ಶುಬ್ಮನ್ ಗಿಲ್ ಸ್ಥಾನವನ್ನು ಪೃಥ್ವಿ ಶಾ ಮತ್ತೆ ಕಸಿದುಕೊಳ್ಳುವುದರಲ್ಲಿ ಯಾವುದೇ ಸಂಶಯವಿಲ್ಲ.

ಪೃಥ್ವಿ ಶಾ ಐದು ಟೆಸ್ಟ್ ಪಂದ್ಯಗಳಲ್ಲಿ 42ರ ಸರಾಸರಿಯಲ್ಲಿ 339 ರನ್ ಪೇರಿಸಿದ್ದಾರೆ. ಇದ್ರಲ್ಲಿ ಒಂದು ಶತಕ ಹಾಗೂ 2 ಅರ್ಧಶತಕಗಳಿವೆ.

ಇನ್ನೊಂದೆಡೆ ಮಯಾಂಕ್ ಅಗರ್ ವಾಲ್. ನತದೃಷ್ಟ ಕ್ರಿಕೆಟಿಗ. ಮೊದಲೇ ಟೀಮ್ ಇಂಡಿಯಾದಲ್ಲಿ ತಡವಾಗಿ ಅವಕಾಶ ಸಿಕ್ಕಿತ್ತು. ಸಿಕ್ಕ ಅವಕಾಶವನ್ನು ಬಳಸಿಕೊಂಡ್ರೂ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಳ್ಳಲಿಲ್ಲ.
mayank agarwal team india saakshatvಕಳೆದ ಆಸ್ಟ್ರೇಲಿಯಾ ಸರಣಿಯ ಗಬ್ಬಾ ಟೆಸ್ಟ್ ಪಂದ್ಯದಲ್ಲಿ ಆಡಿದ ನಂತರದ ಟೀಮ್ ಇಂಡಿಯಾದ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಳ್ಳಲಿಲ್ಲ. ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ದ ಮಯಾಂಕ್ ಅಗರ್ ವಾಲ್ ಮೊದಲ ಇನಿಂಗ್ಸ್ ನಲ್ಲಿ 38 ರನ್ ಹಾಗೂ ಎರಡನೇ ಇನಿಂಗ್ಸ್ ನಲ್ಲಿ 9 ರನ್ ಗಳಿಸಿದ್ದರು.
ಇಲ್ಲಿಯವರೆಗೆ 14 ಟೆಸ್ಟ್ ಪಂದ್ಯಗಳನ್ನು ಆಡಿರುವ ಮಯಾಂಕ್ ಅಗರ್ ವಾಲ್ 46ರ ಸರಾಸರಿಯಲ್ಲಿ 1052 ರನ್ ಪೇರಿಸಿದ್ದಾರೆ. ಎರಡು ದ್ವಿಶತಕ ಸೇರಿ ಮೂರು ಶತಕಗಳನ್ನು ಸಿಡಿಸಿರುವ ಮಯಾಂಕ್, ನಾಲ್ಕು ಅರ್ಧಶತಕಗಳನ್ನು ದಾಖಲಿಸಿದ್ದಾರೆ.
ಅಂಕಿ ಅಂಶಗಳನ್ನು ನೋಡಿದಾಗ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ನಲ್ಲಿ ಮಯಾಂಕ್ ಅಗರ್ ವಾಲ್ ಗೆ ಅವಕಾಶ ನೀಡಬೇಕಾಗಿತ್ತು. ಇಂಗ್ಲೆಂಡ್ ವಿರುದ್ಧದ ಸರಣಿ ಹಾಗೂ ಐಪಿಎಲ್ ನಲ್ಲಿ ನೀರಸ ಪ್ರದರ್ಶನ ನೀಡಿದ್ದ ಗಿಲ್ ಗಿಂತ ಮಯಾಂಕ್ ಆಯ್ಕೆ ಉತ್ತಮವಾಗಿತ್ತು. ಆದ್ರೆ ಟೀಮ್ ಮ್ಯಾನೇಜ್ ಮೆಂಟ್ ಕರ್ನಾಟಕದ ಆಟಗಾರರನಿಗೆ ಅವಕಾಶ ನೀಡಲಿಲ್ಲ.
ಒಟ್ಟಿನಲ್ಲಿ ಟೀಮ್ ಇಂಡಿಯಾದ ಟೀಮ್ ಮ್ಯಾನೇಜ್ ಮೆಂಟ್ ನ ಆಯ್ಕೆಯ ಮಾನದಂಡವೇ ಅರ್ಥವಾಗುತ್ತಿಲ್ಲ. ಶುಬ್ಮನ್ ಗಿಲ್ ಗೆ ಸಾಲು ಸಾಲು ಅವಕಾಶಗಳನ್ನು ನೀಡಲಾಗಿತ್ತು. ಆದ್ರೆ ಮಯಾಂಕ್ ಅಗರ್ ವಾಲ್ ಗೆ ಅಂತಹ ಅವಕಾಶವನ್ನೇ ನೀಡಲಾಗಿಲ್ಲ. ಕಾರಣ ಏನು ಎಂಬುದೇ ಆರ್ಥವಾಗುತ್ತಿಲ್ಲ.

Tags: #saakshatvbcciCricketMayank AgarwalPrithvi ShahShubman GillSportsteam indiatest cricket
ShareTweetSendShare
Join us on:

Related Posts

ಬರ್ತೀನಿ ಬಿಡಿ ಅಂತ ಟೇಬಲ್ ಹೊಡೆದ್ರೆ ಈ ರಾಜ್ಯ ನಿಮ್ಮ ತಾತನ ಆಸ್ತಿನಾ?ಕಲ್ಯಾಣ ಕರ್ನಾಟಕದ ಮಣ್ಣಿನ ಜನ ಯಾವುದಕ್ಕೂ ಹೆದರುವುದಿಲ್ಲ ಬಗ್ಗುವುದೂ ಇಲ್ಲ. ಇಂತಹ ಹತ್ತಾರು ಜನರನ್ನು ನಾವು ನೋಡಿದ್ದೇವೆ: ಕುಮಾರಸ್ವಾಮಿ ವಿರುದ್ಧ ಶರಣಪ್ರಕಾಶ್ ಪಾಟೀಲ್ ಆಕ್ರೋಶ

ಬರ್ತೀನಿ ಬಿಡಿ ಅಂತ ಟೇಬಲ್ ಹೊಡೆದ್ರೆ ಈ ರಾಜ್ಯ ನಿಮ್ಮ ತಾತನ ಆಸ್ತಿನಾ?ಕಲ್ಯಾಣ ಕರ್ನಾಟಕದ ಮಣ್ಣಿನ ಜನ ಯಾವುದಕ್ಕೂ ಹೆದರುವುದಿಲ್ಲ ಬಗ್ಗುವುದೂ ಇಲ್ಲ. ಇಂತಹ ಹತ್ತಾರು ಜನರನ್ನು ನಾವು ನೋಡಿದ್ದೇವೆ: ಕುಮಾರಸ್ವಾಮಿ ವಿರುದ್ಧ ಶರಣಪ್ರಕಾಶ್ ಪಾಟೀಲ್ ಆಕ್ರೋಶ

by Shwetha
October 18, 2026
0

ರಾಜ್ಯ ರಾಜಕಾರಣದ ವಾಕ್ಸಮರ ಈಗ ಅತಿರೇಕಕ್ಕೆ ತಲುಪಿದ್ದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ಅಬ್ಬರಕ್ಕೆ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಕಲ್ಬುರ್ಗಿಯಲ್ಲಿ ಅತ್ಯಂತ ಕಟು...

ಮಹಾರಾಷ್ಟ್ರದಲ್ಲಿ ಅವಧಿ ಮೀರಿದ ಆಹಾರ ಉತ್ಪನ್ನಗಳ ಅಕ್ರಮ ಮಾರಾಟ ಜಾಲ ಪತ್ತೆ: ₹48 ಲಕ್ಷದ ಸರಕು ಜಪ್ತಿ, ರಿಲಯನ್ಸ್‌ ನಿರ್ದೇಶಕ ಸೇರಿ 10 ಜನರ ವಿರುದ್ಧ FIR

ಮಹಾರಾಷ್ಟ್ರದಲ್ಲಿ ಅವಧಿ ಮೀರಿದ ಆಹಾರ ಉತ್ಪನ್ನಗಳ ಅಕ್ರಮ ಮಾರಾಟ ಜಾಲ ಪತ್ತೆ: ₹48 ಲಕ್ಷದ ಸರಕು ಜಪ್ತಿ, ರಿಲಯನ್ಸ್‌ ನಿರ್ದೇಶಕ ಸೇರಿ 10 ಜನರ ವಿರುದ್ಧ FIR

by Shwetha
October 18, 2026
0

ಅವಧಿ ಮುಗಿದ, ಹಾನಿಗೊಳಗಾದ ಹಾಗೂ ಗ್ರಾಹಕರಿಂದ ತಿರಸ್ಕರಿಸಲ್ಪಟ್ಟ ಆಹಾರ ಉತ್ಪನ್ನಗಳನ್ನು ನಾಶಪಡಿಸುವ ಬದಲು ಮತ್ತೆ ಮಾರುಕಟ್ಟೆಗೆ ತಂದು ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಆಹಾರ...

ಪ್ರಧಾನಿಯ ತಂಬೂರಿ ಸದ್ದಿಗೆ ಕಾಂಗ್ರೆಸ್ ಕಿಡಿ: ಸನಾತನ ಸಂಸ್ಕೃತಿಯ ವಿರೋಧಿ ಕಾಂಗ್ರೆಸ್ ಎಂದ ಕೇಸರಿ ಪಡೆ

ಮೋದಿಯಾಟ ಕೊನೆಗಾಣಿಸಲು ಸಿಜೆಪಿ ಪ್ರತಿಭಟನೆಗೆ ಕಾಂಗ್ರೆಸ್ ಫಂಡಿಂಗ್: ಪ್ರಜಾಪ್ರಭುತ್ವ ಉಳಿಸಲು ಹಣ ಕೊಟ್ಟರೆ ತಪ್ಪೇ?- ಬಿ ಕೆ ಹರಿಪ್ರಸಾದ್

by Shwetha
October 18, 2026
0

ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ನಡೆಯುತ್ತಿರುವ ಪ್ರತಿಯೊಂದು ಹೋರಾಟಕ್ಕೂ ಕಾಂಗ್ರೆಸ್ ಪಕ್ಷದ ಬೆಂಬಲವಿದೆ. ಕಾಕ್ರೋಚ್ ಜನತಾ ಪಾರ್ಟಿ ಅಂದರೆ...

ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತರ ಪ್ರತಿಭಟನೆ: ರೈತರೊಂದಿಗೆ ಸಭೆ ನಡೆಸಲು ಬೆಳಗಾವಿಗೆ ಸಿಎಂ ಡಿ.ಕೆ. ಶಿವಕುಮಾರ್

ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತರ ಪ್ರತಿಭಟನೆ: ರೈತರೊಂದಿಗೆ ಸಭೆ ನಡೆಸಲು ಬೆಳಗಾವಿಗೆ ಸಿಎಂ ಡಿ.ಕೆ. ಶಿವಕುಮಾರ್

by Shwetha
October 18, 2026
0

ಕಬ್ಬಿನ ಬೆಲೆ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಳಗಾವಿ, ಧಾರವಾಡ, ಕಲಬುರಗಿ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ...

ಬಾಂಬೆ ಬಾಯ್ಸ್ ಪುಸ್ತಕ ಹೊರಬಂದರೆ ನಾಯಕರು ಬೆತ್ತಲಾಗುತ್ತಾರೆ,ಸಿದ್ದರಾಮಯ್ಯ ಮುಗಿಸಿದರೆ ನಮ್ಮ ಹಾದಿ ಸುಲಭ ಎಂಬ ಲೆಕ್ಕಾಚಾರ: ಸ್ಟಿಂಗ್ ಆಪರೇಷನ್ ಹಿಂದಿನ ಕರಾಳ ಸತ್ಯ ಬಿಚ್ಚಿಟ್ಟ ಎಚ್ ವಿಶ್ವನಾಥ್

ಬಾಂಬೆ ಬಾಯ್ಸ್ ಪುಸ್ತಕ ಹೊರಬಂದರೆ ನಾಯಕರು ಬೆತ್ತಲಾಗುತ್ತಾರೆ,ಸಿದ್ದರಾಮಯ್ಯ ಮುಗಿಸಿದರೆ ನಮ್ಮ ಹಾದಿ ಸುಲಭ ಎಂಬ ಲೆಕ್ಕಾಚಾರ: ಸ್ಟಿಂಗ್ ಆಪರೇಷನ್ ಹಿಂದಿನ ಕರಾಳ ಸತ್ಯ ಬಿಚ್ಚಿಟ್ಟ ಎಚ್ ವಿಶ್ವನಾಥ್

by Shwetha
October 18, 2026
0

ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಸ್ಟಿಂಗ್ ಆಪರೇಷನ್ ಮತ್ತು ಚಾರಿತ್ರ್ಯಹನನದ ಸಂಸ್ಕೃತಿಯ ಬಗ್ಗೆ ಹಿರಿಯ ರಾಜಕಾರಣಿ ಎಚ್ ವಿಶ್ವನಾಥ್ ಈ ರೀತಿ ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram