ಮೂರು ಮತ್ತು ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾ ಪ್ರಕಟ
ಇಂಗ್ಲೆಂಡ್ ವಿರುದ್ಧದ ಮೂರು ಮತ್ತು ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ.
ವೇಗಿ ಉಮೇಶ್ ಯಾದವ್ ಅವರು ಶಾರ್ದೂಲ್ ಥಾಕೂರ್ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಇನ್ನುಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಉಮೇಶ್ ಯಾದವ್ ಅವರು ಸ್ನಾಯು ಸೆಳೆತದಿಂದಾಗಿ ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ವಂಚಿತರಾಗಿದ್ದರು. ಹಾಗೇ ಶಾರ್ದೂಲ್ ಥಾಕೂರ್ ಅವರು ವಿಜಯ ಹಜಾರೆ ಟೂರ್ನಿಯಲ್ಲಿ ಆಡಲಿದ್ದಾರೆ.
ಇನ್ನೊಂದೆಡೆ ಶಹಬಾಝ್ ನದೀಮ್ ಬದಲು ಹಾರ್ದಿಕ್ ಪಾಂಡ್ಯ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಶಹಬಾಝ್ ನದೀಮ್ ಅವರು ಮೊದಲ ಟೆಸ್ಟ್ ಪಂದ್ಯದಲ್ಲಿ ಆಡಿದ್ದರು.
ಇನ್ನುಳಿದಂತೆ ಮಹಮ್ಮದ್ ಶಮಿ ತಂಡವನ್ನು ಸೇರಿಕೊಂಡಿಲ್ಲ. ಬಹುಶಃ ಏಕದಿನ ಮತ್ತು ಟಿ-ಟ್ವೆಂಟಿ ಸರಣಿಗೆ ತಂಡದಲ್ಲಿ ಸ್ಥಾನ ಪಡೆಯಬಹುದು.
ಟೀಮ್ ಇಂಡಿಯಾ
ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯಾ ರಹಾನೆ (ಉಪನಾಯಕ), ರೋಹಿತ್ ಶರ್ಮಾ, ಮಯಾಂಕ್ ಅಗರ್ ವಾಲ್, ಶುಬ್ಮನ್ ಗಿಲ್, ಚೇತೇಶ್ವರ್ ಪೂಜಾರ, ಕೆ.ಎಲ್. ರಾಹುಲ್, ಹಾರ್ದಿಕ್ ಪಾಂಡ್ಯ, ರಿಷಬ್ ಪಂತ್, ವೃದ್ದಿಮಾನ್ ಸಾಹ, ರವೀಂದ್ರನ್ ಅಶ್ವಿನ್, ಕುಲದೀಪ್ ಯಾದವ್, ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ಇಶಾಂತ್ ಶರ್ಮಾ, ಜಸ್ಪ್ರಿತ್ ಬೂಮ್ರಾ, ಮಹಮ್ಮದ್ ಸೀರಾಜ್.








