‘ರೆಟ್ರೋ’ ಥೀಮ್ ಜರ್ಸಿಯಲ್ಲಿ ಕಣಕ್ಕಿಳಿಯಲಿದೆ ಟೀಂ ಇಂಡಿಯಾ
ಟೀಂ ಇಂಡಿಯಾ ಆಟಗಾರರು ಆಸ್ಟ್ರೇಲಿಯಾ ವಿರುದ್ಧದ ಟೂರ್ನಿಗೆ ಪ್ರವಾಸ ಕೈಗೊಂಡಿದ್ದು, ಕೊರೊನಾ ಬಳಿಕ ಟೀಂ ಇಂಡಿಯಾ, ಆಸೀಸ್ ವಿರುದ್ಧ ತನ್ನ ಮೊದಲ ಅಂತಾರಾಷ್ಟ್ರೀಯ ಟೂರ್ನಿಯನ್ನು ಆಡುತ್ತಿದೆ.
ಆಸೀಸ್ ನೆಲದಲ್ಲಿ ಟೀಂ ಇಂಡಿಯಾ ಏಕದಿನ, ಟಿ20, ಟೆಸ್ಟ್ ಟೂರ್ನಿಗಳನ್ನು ಆಡಲಿದ್ದು, ಇದರಲ್ಲಿ ಒಂದು ಡೇ ಅಂಡ್ ನೈಟ್ ಪಂದ್ಯವೂ ಸೇರಿದೆ.
ಆಸೀಸ್ ನೆಲದಲ್ಲಿ ಮೂರು ತಿಂಗಳ ಕಾಲ ಟೀಂ ಇಂಡಿಯಾ ಏಕದಿನ, ಟಿ 20, ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಮೊದಲ ಏಕದಿನ ಪಂದ್ಯ ನವೆಂವರ್ 27 ರಂದು ಸಿಡ್ನಿಯಲ್ಲಿ ನಡೆಯಲಿದೆ.
ಮೂಲಗಳ ಪ್ರಕಾರ ಈ ಸರಣಿಯಲ್ಲಿ ಕೊಹ್ಲಿ ಪಡೆ ವಿಶೇಷ ಲುಕ್ ನಲ್ಲಿ ಕಾಣಿಸಿಕೊಳ್ಳಲಿದೆ ಎಂದು ಹೇಳಲಾಗುತ್ತಿದೆ. 70-80ರ ದಶಕದಲ್ಲಿ ಭಾರತ ಧರಿಸುತ್ತಿದ್ದ ಮಾದರಿಯ ಜರ್ಸಿಯಲ್ಲಿ ಟೀಂ ಇಂಡಿಯಾ ಈ ಟೂರ್ನಿಯಲ್ಲಿ ಕಂಗೊಳಿಸಲಿದೆ.
‘ರೆಟ್ರೋ’ ಥೀಮ್‍ನ ಈ ಜರ್ಸಿ ಕಡು ನೀಲಿ ಹಾಗೂ ತಿಳಿ ನೀಲಿ ಬಣ್ಣದಿಂದ ಕೂಡಿರಲಿದೆ. ಜರ್ಸಿಯಲ್ಲಿ ಬಿಸಿಸಿಐನ ಲೋಗೋ ಹಾಗೂ ಹೊಸ ಕಿಟ್ ಸ್ಪಾನ್ಸರ್ ‘ಎಂಪಿಎಲ್’ ಲೋಗೋ ಕೂಡ ಕಾಣಿಸಿಕೊಳ್ಳಲಿದೆ.
ಇನ್ನು ಭಾರತ ವಿರುದ್ಧದ ಟಿ20 ಸರಣಿಗೆ ಆಸ್ಟ್ರೇಲಿಯಾ ಕೂಡ ವಿಶೇಷ ಜರ್ಸಿಯನ್ನು ಬಿಡುಗಡೆಗೊಳಿಸಿದೆ. ಸ್ಥಳೀಯ ವಿನ್ಯಾಸದ ವಿಶೇಷ ಜರ್ಸಿಯೊಂದಿಗೆ ಆಸ್ಟ್ರೇಲಿಯಾ ಭಾರತದ ವಿರುದ್ಧ ಕಣಕ್ಕಿಳಿಯಲಿದೆ.
ರೋಹಿತ್ ಕ್ಯಾಪ್ಟನ್ ಆಗದಿದ್ದರೇ ದೇಶಕ್ಕೆ ನಷ್ಟ
ಭಾರತದ ಟಿ 20 ತಂಡ : ವಿರಾಟ್ ಕೊಹ್ಲಿ (ಕ್ಯಾಪ್ಟನ್), ಶಿಖರ್ ಧವನ್, ಮಾಯಾಂಕ್ ಅಗರ್ವಾಲ್, ಕೆ.ಎಲ್.ರಾಹುಲ್ (ಉಪನಾಯಕ ಮತ್ತು ವಿಕೆಟ್ ಕೀಪರ್), ಶ್ರೇಯಾಸ್ ಅಯ್ಯರ್, ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಹಲ್, ಜಸ್ಪ್ರಿತ್ ಬುಮ್ರಾ, ಮೊಹಮ್ಮದ್. ಶಮಿ, ನವದೀಪ್ ಸೈನಿ, ದೀಪಕ್ ಚಹರ್, ಟಿ ನಟರಾಜನ್.
ಏಕದಿನ ತಂಡ: ವಿರಾಟ್ ಕೊಹ್ಲಿ (ಕ್ಯಾಪ್ಟನ್), ಶಿಖರ್ ಧವನ್, ಶುಬ್ಮನ್ ಗಿಲ್, ಕೆ.ಎಲ್.ರಾಹುಲ್ (ಉಪನಾಯಕ ಮತ್ತು ವಿಕೆಟ್ ಕೀಪರ್), ಶ್ರೇಯಾಸ್ ಅಯ್ಯರ್, ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ಮಾಯಾಂಕ್ ಅಗರ್ವಾಲ್, ರವೀಂದ್ರ ಜಡೇಜಾ, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್ , ಮೊಹಮ್ಮದ್. ಶಮಿ, ನವದೀಪ್ ಸೈನಿ, ಶಾರ್ದುಲ್ ಠಾಕೂರ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್).
ಮತ್ತಷ್ಟು ರಂಗೇರಲಿದೆ ಮುಂದಿನ ಐಪಿಎಲ್ : ಹೊಸ ತಂಡ ಸೇರ್ಪಡೆ
ಭಾರತ ಟೆಸ್ಟ್ ತಂಡ: ವಿರಾಟ್ ಕೊಹ್ಲಿ (ಕ್ಯಾಪ್ಟನ್), ರೋಹಿತ್ ಶರ್ಮಾ, ಮಾಯಾಂಕ್ ಅಗರ್ವಾಲ್, ಪೃಥ್ವಿ ಶಾ, ರಹಾನೆ, ಪೂಜಾರಾ, ಕೆ.ಎಲ್ (ವಿಕೆಟ್ ಕೀಪರ್), ಹನುಮಾ ವಿಹಾರಿ, ಶುಬ್ಮನ್ ಗಿಲ್, ವೃದ್ಧಿಮಾನ್ ಸಹಾ, ರಿಷಬ್ ಪಂತ್, ಜಸ್ಪ್ರಿತ್ ಬುಮ್ರಾ, ಮೊಹಮ್ಮದ್. ಶಮಿ, ಉಮೇಶ್ ಯಾದವ್, ನವದೀಪ್ ಸೈನಿ, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಆರ್.ಅಶ್ವಿನ್, ಮೊಹಮ್ಮದ್. ಸಿರಾಜ್.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel