ಏಷ್ಯಾಕಪ್ 2023 ಆಡಲು ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಹೋಗುವುದಿಲ್ಲ..
ಏಷ್ಯಾ ಕಪ್ ಆಡಲು ಭಾರತ ತಂಡ ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂಬುದನ್ನ ಏಷ್ಯಾ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಅಧ್ಯಕ್ಷ ಜಯ್ ಶಾ ಖಚಿತಪಡಿಸಿದ್ದಾರೆ. 2023 ರ ಏಷ್ಯಾ ಕಪ್ ತಟಸ್ಥ ಸ್ಥಳದಲ್ಲಿ ನಡೆಯಲಿದೆ ಎಂದು ಹೇಳಿದ್ದಾರೆ. ಇದರರ್ಥ ಪಾಕಿಸ್ತಾನ ಇನ್ನು ಮುಂದೆ ಏಷ್ಯಾಕಪ್‌ನ ಆತಿಥ್ಯ ವಹಿಸುವುದಿಲ್ಲ.
ಭಾರತ 2008 ರಲ್ಲಿ ಪಾಕಿಸ್ತಾನದಲ್ಲಿ ಕೊನೆಯ ಪಂದ್ಯವನ್ನು ಆಡಿತ್ತು. ಇದಾದ ಬಳಿಕ 2008 ರಲ್ಲಿ ಮುಂಬೈನಲ್ಲಿ ನಡೆದ ಉಗ್ರರ ದಾಳಿಯ ನಂತರ ಭಾರತ ತಂಡ ಪಾಕಿಸ್ತಾನಕ್ಕೆ ಹೋಗಿರಲಿಲ್ಲ. ಅಂದಿನಿಂದ ಎರಡೂ ತಂಡಗಳು ತಟಸ್ಥ ಸ್ಥಳಗಳಲ್ಲಿ ಆಡುತ್ತಿವೆ, ಅದೂ ಐಸಿಸಿ ಮತ್ತು ಎಸಿಸಿ ಈವೆಂಟ್‌ಗಳಲ್ಲಿ ಮಾತ್ರ. ಇವರಿಬ್ಬರ ನಡುವಿನ ಕೊನೆಯ ದ್ವಿಪಕ್ಷೀಯ ಸರಣಿ 2012-13ರಲ್ಲಿ ನಡೆದಿತ್ತು. ದೀಪಾವಳಿಗೆ ಒಂದು ದಿನ ಮೊದಲು ಅಂದರೆ ಅಕ್ಟೋಬರ್ 23 ರಂದು ಭಾರತ ಮತ್ತು ಪಾಕಿಸ್ತಾನ ತಂಡಗಳು ಟಿ20 ವಿಶ್ವಕಪ್‌ನಲ್ಲಿ ಮುಖಾಮುಖಿಯಾಗಲಿವೆ.
ಏಷ್ಯಾಕಪ್ ಏಕದಿನ ಮಾದರಿಯಲ್ಲಿ ನಡೆಯಲಿದೆ
2023ರಲ್ಲಿ ನಡೆಯಲಿರುವ ಮುಂದಿನ ಏಷ್ಯಾಕಪ್ ಏಕದಿನ ಮಾದರಿಯಲ್ಲಿ ನಡೆಯಲಿದೆ. ಈ ಎರಡೂ ತಂಡಗಳು ಏಷ್ಯಾ ಕಪ್ 2022 ರಲ್ಲಿ ಎರಡು ಪಂದ್ಯಗಳಲ್ಲಿ ಆಡಿದ್ದವು. 1 ಪಂದ್ಯವನ್ನ ಭಾರತ ಮತ್ತು 1 ಪಂದ್ಯವನ್ನು ಪಾಕಿಸ್ತಾನ ಗೆದ್ದಿದೆ.
Team India will not go to Pakistan to play Asia Cup 2023 – Jay Shah