ಬೆಂಗಳೂರು: ಟೆಕ್ಕಿಯೊಬ್ಬಾತ ತಾನು ಮಾಡಿದ್ದ ಸಾಲ ತೀರಿಸುವುದಕ್ಕಾಗಿ ಲ್ಯಾಪ್ ಟಾಪ್ ಕದ್ದು ಪೊಲೀಸರ ಅತಿಥಿಯಾಗಿರುವ ಘಟನೆ ನಡೆದಿದೆ.
ಮುರುಗೇಶ ಲ್ಯಾಪ್ ಟಾಪ್ ಕದ್ದು ಪೊಲೀಸರ ಅತಿಥಿಯಾಗಿರುವ ಆರೋಪಿ. ಈತ ಹೊಸೂರಿನಲ್ಲಿ 6 ಎಕರೆ ಜಮೀನಿನಲ್ಲಿ ಟೊಮೆಟೋ ಬೆಳೆದಿದ್ದ. ಆದರೆ, ಬೆಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಸಾಕಷ್ಟು ನಷ್ಟ ಅನುಭವಿಸಿದ್ದ. ಹೀಗಾಗಿ ಸಾಲಗಾರರ ಕಿರುಕುಳ ತಾಳಲಾರದೆ ಲ್ಯಾಪ್ ಟಾಪ್ ಕಳ್ಳತನ (Laptop Theft) ಮಾಡಿ ಮಾರುತ್ತಿದ್ದ. ಸದ್ಯ ಟೆಕ್ಕಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ವ್ಯಕ್ತಿಯನ್ನು ಮುರುಗೇಶ ಎಂದು ಗುರುತಿಸಲಾಗಿದ್ದು, ಸಿಸ್ಟಮ್ ಆಡ್ಮಿನ್ ಆಗಿ ಕೆಲಸ ಮಾಡುತ್ತಿದ್ದ. ಇದರೊಂದಿಗೆ ಕೃಷಿ ಕೆಲಸ ಕೂಡ ಮಾಡುತ್ತಿದ್ದ. ಬೆಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಸಾಕಷ್ಟು ನಷ್ಟ ಅನುಭವಿಸಿದ್ದ. ಸಾಲ ತೀರಿಸಲಾಗದೇ ಕಳೆದ ಆರು ತಿಂಗಳಿನಿಂದ ಮುರುಗೇಶ ಲ್ಯಾಪ್ ಟಾಪ್ ಸರ್ವಿಸ್, ರಿಪೇರಿ ಮಾಡುವ ಕೆಲಸವನ್ನೂ ಮಾಡುತ್ತಿದ್ದ.
ಕೆಲಸದ ನೆಪ ಹೂಡಿ ಹಲವಾರು ಲ್ಯಾಪ್‌ಟಾಪ್ ಕದ್ದಿದ್ದ. ತಾನು ಕೆಲಸ ಮಾಡುತ್ತಿದ್ದ ಕಂಪನಿಯಲ್ಲಿಯೂ ಲ್ಯಾಪ್ ಟಾಪ್ ಕಳ್ಳತನ ಮಾಡಿತ್ತ. ಈ ಕುರಿತು ಕಂಪನಿಯವರು ಪ್ರಶ್ನಿಸಿದಾಗ ರಜೆ ಹಾಕಿ ನಾಪತ್ತೆಯಾಗಿದ್ದ. ಕದ್ದ ಲ್ಯಾಪ್‌ಟಾಪ್‌ಗಳನ್ನು ಹೊಸೂರಿನಲ್ಲಿ (Hosur) ಮಾರಾಟ ಮಾಡಿದ್ದ.
ಸದ್ಯ ಟೆಕ್ಕಿ ಮುರುಗೇಶನನ್ನು ಬಂಧಿಸಲಾಗಿದ್ದು, 22 ಲಕ್ಷ ರೂ. ಮೌಲ್ಯದ 50 ಲ್ಯಾಪ್ ಟಾಪ್ ಗಳನ್ನು ವಶಕ್ಕೆ ಪಡೆಯಲಾಗಿದೆ.