ಮಂಡ್ಯ: ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿಯೇ ತಹಸೀಲ್ದಾರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಜಿಲ್ಲೆಯ ಪಾಂಡವಪುರದಲ್ಲಿ ನಡೆದಿದೆ.
40 ಸಾವಿರ ರೂ. ಲಂಚ (Bribery) ಪಡೆಯುತ್ತಿದ್ದ ಸಂದರ್ಭದಲ್ಲಿ ಪಾಂಡವಪುರ ತಹಶೀಲ್ದಾರ್ (Tehsildar) ಸೌಮ್ಯಾ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ವಿಎ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸೌಮ್ಯಾ ಅವರು 40 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ವಿಎ ಮರಿಸ್ವಾಮಿ ಅವರನ್ನು ಗುಮ್ಮನಹಳ್ಳಿಯಿಂದ ದೊಡ್ಡಮ್ಮನಹಳ್ಳಿಗೆ ವರ್ಗಾವಣೆ ಮಾಡಲು ತಹಶೀಲ್ದಾರ್ ಸೌಮ್ಯಾ ಲಂಚ ಕೇಳಿದ್ದರು ಎನ್ನಲಾಗಿದ್ದು, ಈ ಕುರಿತು ಮರಿಸ್ವಾಮಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಲೋಕಾಯುಕ್ತ ಇನ್ಸ್ಪೆಕ್ಟರ್ ಬ್ಯಾಟರಾಯಗೌಡ ನೇತೃತ್ವದಲ್ಲಿ ದಾಳಿ ನಡೆಸಿ, ಕಚೇರಿಯಲ್ಲಿ 40 ಸಾವಿರ ರೂ. ಲಂಚ ಪಡೆಯುತ್ತಿದ್ದ ಸಂದರ್ಭದಲ್ಲ ಸಿಕ್ಕಿಬಿದ್ದಿದ್ದಾರೆ.








