ಬೆಂಗಳೂರು ಉಗ್ರರ ತಾಣವಾಗುತ್ತಿದೆ ಎಂಬ ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ ವಿರೋಧ ಪಕ್ಷದ ನಾಯಕರು ಹಾಗೂ ಅನೇಕರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಇದೀಗ ಸಚಿವ ಆನಂದ್ ಸಿಂಗ್ ಅವರು ಬಳ್ಳಾರಿಯಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಬೆಂಗಳೂರಿನ ನಾನಾ ಕಡೆ ಈ ಹಿಂದೆ ನಡೆದ ಚಟುವಟಿಕೆಗಳನ್ನು ಆಧರಿಸಿ, ಮತ್ತು ರಾಜ್ಯದ ನಾನ ಕಡೆ ನಡೆದ ಉಗ್ರರ ಘಟನೆಗಳನ್ನು ಆಧರಿಸಿ, NIA ಕೇಂದ್ರ ಬರಬಹುದೆಂಬ ಉದ್ದೇಶದಿಂದ ಆ ರೀತಿ ಹೇಳಿರಬಹುದು.
ಬೇರೆ ರೀತಿಯಲ್ಲಿ ಹೇಳಿಲ್ಲ ಎಂದು ತೇಜಸ್ವಿ ಸೂರ್ಯ ಹೇಳಿಕೆಯನ್ನ ಸಮರ್ಥಿಸಿಕೊಂಡಿದ್ದಾರೆ.
ಇನ್ನೂ ಇದೇ ವೇಳೆ ಶಾಲೆಗಳನ್ನು ಪ್ರಾರಂಭ ಮಾಡೋ ವಿಚಾರವಾಗಿ ಮಾತನಾಡಿದ ಸಚಿವರು ಸ್ವಷ್ಟ ನಿಲುವಿಗೆ ಬರುವುದಕ್ಕೆ ಇನ್ನೂ ಸಾಧ್ಯವಾಗ್ತಿಲ್ಲ.
ಈ ಬಗ್ಗೆ ಪರ ಮತ್ತು ವಿರೋಧ ಚರ್ಚೆ ಮಾಡುತ್ತಿದ್ದಾರೆ. ಸುರೇಶ್ ಕುಮಾರ್ ಅವರು ಏನು ತಿರ್ಮಾನ ಕೈಗೊಳ್ಳುತ್ತಾರೆ ನೋಡೋಣ ಎಂದು ತಿಳಿಸಿದ್ದಾರೆ.