ನವದೆಹಲಿ : ಸಂಸದ ತೇಜಸ್ವಿ ಸೂರ್ಯ ಅವರು ಬಿಜೆಪಿಯ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯಾದರ್ಶಿಯಾಗಿ ಸಚಿವ ಸಿ.ಟಿ.ರವಿ ಅವರನ್ನು ನೇಮಿಸಲಾಗಿದೆ.
ಪಕ್ಷದ ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಶನಿವಾರ ಹೊಸ ತಂಡವನ್ನು ಪ್ರಕಟಿಸಿದ್ದಾರೆ.
ಆಸ್ಪತ್ರೆಯಲ್ಲಿ ನಟ ಶರಣ್ : ಅಣ್ಣನ ಆರೋಗ್ಯದ ಬಗ್ಗೆ ಶೃತಿ ಮಾಹಿತಿ
ಇದರಲ್ಲಿ ಸಂಸದ ತೇಜಸ್ವಿ ಸೂರ್ಯ ಅವರಿಗೆ ಪಕ್ಷದ ಯುವ ಘಟಕದ ಹೊಣೆ ನೀಡಲಾಗಿದೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನಗಳಿಗೆ ಸಚಿವ ಸಿ.ಟಿ ರವಿ ಸೇರಿದಂತೆ ಹೊಸ ಮುಖಂಡರನ್ನು ಆಯ್ಕೆ ಮಾಡಲಾಗಿದೆ.
ಡಾ.ರಮಣ್ ಸಿಂಗ್, ಮುಕುಲ್ ರಾಯ್, ಅನ್ನಪೂರ್ಣಾ ದೇವಿ, ಬೈಜ್ಯಂತ್ ಜಯ ಪಾಂಡಾ ರಾಷ್ಟ್ರೀಯ ಉಪಾಧ್ಯಕ್ಷರಾಗಿ ನೇಮವಾಗಿದ್ದಾರೆ.
ಪಕ್ಷದ ರಾಷ್ಟ್ರೀಯ ವಕ್ತಾರರ ಸಂಖ್ಯೆಯನ್ನು 23ಕ್ಕೆ ಹೆಚ್ಚಿಸಲಾಗಿದೆ. ರಾಜ್ಯದ ಸಂಸದ ರಾಜೀವ್ ಚಂದ್ರಶೇಖರ್ ಅವರು 23 ಮಂದಿ ವಕ್ತಾರರ ಪಟ್ಟಿಯಲ್ಲಿದ್ದಾರೆ.