ADVERTISEMENT
Wednesday, April 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಗ್ಯಾರಂಟಿ ಗದ್ದಲದಲ್ಲಿ ಬೆಂಗಳೂರು ನಿರ್ಲಕ್ಷ್ಯ: ಒಂದೇ ಒಂದು ಯೋಜನೆ ತೋರಿಸಿ, ಸಿಎಂಗೆ ತೇಜಸ್ವಿ ಸೂರ್ಯ ನೇರ ಸವಾಲು!

Tejaswi Surya's direct challenge to the CM!

Shwetha by Shwetha
October 24, 2025
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು: “ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳ ಅಮಲಿನಲ್ಲಿ ಆಡಳಿತವನ್ನೇ ಮರೆತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ನಿಮ್ಮ ಅಧಿಕಾರಾವಧಿಯಲ್ಲಿ ಬೆಂಗಳೂರಿನ ಅಭಿವೃದ್ಧಿಗಾಗಿ ಮಾಡಿದ ಒಂದೇ ಒಂದು ನೂತನ ಯೋಜನೆಯನ್ನು ತೋರಿಸಿ,” ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ಮುಖ್ಯಮಂತ್ರಿಗಳಿಗೆ ಬಹಿರಂಗ ಸವಾಲು ಹಾಕಿದ್ದಾರೆ.

ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. “ಈ ಸರ್ಕಾರಕ್ಕೆ ರಾಜ್ಯದ ಅಭಿವೃದ್ಧಿಯ ಬಗ್ಗೆ ಯಾವುದೇ ಕಾಳಜಿಯಿಲ್ಲ. ಬಿಹಾರದ ಚುನಾವಣೆಗೆ ಹಣ ಹೊಂದಿಸಲು ರಾಜ್ಯದ ಬೊಕ್ಕಸವನ್ನು ಬರಿದು ಮಾಡುತ್ತಿದ್ದಾರೆ,” ಎಂದು ಗಂಭೀರ ಆರೋಪ ಮಾಡಿದರು.

Related posts

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

April 1, 2026
ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

April 1, 2026

ಬೆಂಗಳೂರು ಅಭಿವೃದ್ಧಿ ಸಂಪೂರ್ಣ ಸ್ಥಗಿತ

“ಹಿಂದಿನ ಬಿಜೆಪಿ ಸರ್ಕಾರ ಆರಂಭಿಸಿದ್ದ ಫ್ಲೈಓವರ್ ಕಾಮಗಾರಿಗಳು ಇಂದಿಗೂ ಪೂರ್ಣಗೊಂಡಿಲ್ಲ. ಹೊಸ ಯೋಜನೆಗಳಂತೂ ಕನಸಿನ ಮಾತು. ಬೆಂಗಳೂರಿನಲ್ಲಿ ಸೈಟುಗಳಿಗೆ ರಾಜಾರೋಷವಾಗಿ ‘ರೇಟ್ ಚಾರ್ಟ್’ ನಿಗದಿಪಡಿಸಲಾಗುತ್ತಿದೆ. ಇದು ವರ್ಗಾವಣೆ ದಂಧೆಯಷ್ಟೇ ವ್ಯಾಪಕವಾಗಿ ನಡೆಯುತ್ತಿದೆ. ಬೆಂಗಳೂರಿನ ಜನತೆ ಮೂಲಸೌಕರ್ಯಗಳಿಗಾಗಿ ಪರದಾಡುತ್ತಿದ್ದರೆ, ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ. ಮುಖ್ಯಮಂತ್ರಿಗಳೇ, ನೀವು ಬೆಂಗಳೂರಿಗೆ ನೀಡಿದ ಕೊಡುಗೆ ಏನು? ಒಂದೇ ಒಂದು ಯೋಜನೆಯನ್ನು ಹೆಸರಿಸಿ,” ಎಂದು ಸೂರ್ಯ ಪ್ರಶ್ನಿಸಿದರು.

ಗ್ಯಾರಂಟಿಗಳಿಗಾಗಿ ಇಲಾಖೆಗಳ ಹಣ ಬಳಕೆ

ರಾಜ್ಯದ ಆರ್ಥಿಕ ಶಿಸ್ತನ್ನು ಸರ್ಕಾರ ಹಾಳುಗೆಡವಿದೆ ಎಂದು ಆರೋಪಿಸಿದ ಸಂಸದರು, “ಬಿಜೆಪಿ ಸರ್ಕಾರವು ‘ರೆವೆನ್ಯೂ ಸರ್‌ಪ್ಲಸ್’ (ಕಂದಾಯ ಹೆಚ್ಚುವರಿ) ಬಜೆಟ್ ನೀಡಿತ್ತು. ಆದರೆ ಇಂದು ನೀವು ಗುತ್ತಿಗೆದಾರರಿಗೆ ಬಿಲ್ ಪಾವತಿಸಲು ಹಣವಿಲ್ಲದೆ ಸತಾಯಿಸುತ್ತಿದ್ದೀರಿ. ಹಣ ಕೇಳಲು ಬರುವ ಗುತ್ತಿಗೆದಾರರಿಗೆ ನಿಮ್ಮ ಸರ್ಕಾರ ಬೆದರಿಕೆ ಹಾಕುತ್ತಿದೆ. ಇದರಿಂದ ಅಭಿವೃದ್ಧಿ ಕಾಮಗಾರಿಗಳು ಅರ್ಧಕ್ಕೆ ನಿಂತಿವೆ,” ಎಂದರು.

“ರಾಜ್ಯದ ಬಜೆಟ್‌ನಲ್ಲಿ ಗಳಿಸುವ ಪ್ರತಿ 100 ರೂಪಾಯಿಯಲ್ಲಿ 18 ರೂಪಾಯಿ ಬಡ್ಡಿ ಕಟ್ಟಲು ಹೋಗುತ್ತಿದೆ. ಅಭಿವೃದ್ಧಿ ಇಲಾಖೆಗಳಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಲಾಗುತ್ತಿದೆ. ಜನರನ್ನು ಸ್ವಾವಲಂಬಿಗಳನ್ನಾಗಿ ಮಾಡುವ ಬದಲು, ಸರ್ಕಾರದ ಮೇಲೆ ಅವಲಂಬಿತರಾಗುವಂತೆ ಮಾಡಿ ಅವರನ್ನು ಸೋಮಾರಿಗಳನ್ನಾಗಿಸುತ್ತಿದ್ದೀರಿ,” ಎಂದು ಕಿಡಿಕಾರಿದರು.

ರಾಜ್ಯಕ್ಕೆ ಹಿಡಿದ ಗ್ರಹಣ ಎರಡು ವರ್ಷದಲ್ಲಿ ಬಿಡಲಿದೆ

ಸರ್ಕಾರದ ಆಡಳಿತವನ್ನು ‘ಅಮಾವಾಸ್ಯೆ-ಹುಣ್ಣಿಮೆ’ಗೆ ಹೋಲಿಸಿದ ಅವರು, “ನಿಮ್ಮ ಆಡಳಿತವು ರಾಜ್ಯಕ್ಕೆ ಹಿಡಿದ ಗ್ರಹಣದಂತಿದೆ. ಆದರೆ ಜನರಿಗೆ ಗೊತ್ತಿದೆ, ಇನ್ನು ಎರಡು ವರ್ಷಗಳಲ್ಲಿ ಈ ಗ್ರಹಣ ಬಿಡಲಿದೆ. ಆಗ ನಿಮ್ಮ ಕೊಡುಗೆ ಏನೆಂದು ಜನ ಕೇಳುತ್ತಾರೆ. ರಾಜ್ಯವನ್ನು ಸಾಲದ ಸುಳಿಗೆ ಸಿಲುಕಿಸಿದ್ದು, ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣಗಳ ಹೆಚ್ಚಳ, ಕೈಗಾರಿಕೋದ್ಯಮಿಗಳು ರಾಜ್ಯ ತೊರೆಯುತ್ತಿರುವುದು ಇದೇ ನಿಮ್ಮ ಸರ್ಕಾರದ ಸಾಧನೆಯಾಗಬಾರದು,” ಎಂದು ಎಚ್ಚರಿಸಿದರು.

ಮಂತ್ರಿಗಳಿಗೆ ಸಲಹೆ, ಮೋದಿಗೆ ಪ್ರಶ್ನೆ ಬಿಡಿ

ಕೊನೆಯಲ್ಲಿ ಸರ್ಕಾರಕ್ಕೆ ಚಾಟಿ ಬೀಸಿದ ತೇಜಸ್ವಿ ಸೂರ್ಯ, “ಜ್ಯೋತಿಷ್ಯವನ್ನು ಜ್ಯೋತಿಷಿಗಳಿಗೆ ಬಿಟ್ಟುಬಿಡಿ. ಮೊದಲು ಆಡಳಿತದತ್ತ ಗಮನ ಕೊಡಿ. ಐಟಿ ಸಚಿವರಿಗೆ ರಾಜ್ಯಕ್ಕೆ ಬಂಡವಾಳ ತರಲು ಹೇಳಿ. ಗೃಹ ಸಚಿವರು ಕುಸಿದಿರುವ ಕಾನೂನು ಸುವ್ಯವಸ್ಥೆಯನ್ನು ಸರಿಪಡಿಸಲಿ. ಮೊದಲು ಸರ್ಕಾರಿ ನೌಕರರಿಗೆ ಸರಿಯಾಗಿ ಸಂಬಳ ಕೊಡಿ. ಇದೆಲ್ಲವನ್ನೂ ಬಿಟ್ಟು, ಪ್ರಧಾನಿ ಮೋದಿಯವರಿಗೆ ಪ್ರಶ್ನೆ ಕೇಳುವುದನ್ನು ನಿಲ್ಲಿಸಿ,” ಎಂದು ತಿವಿದರು.

ShareTweetSendShare
Join us on:

Related Posts

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

by Shwetha
April 1, 2026
0

ರಾಜ್ಯ ರಾಜಕಾರಣದಲ್ಲಿ ಹಾಗೂ ವಿಶೇಷವಾಗಿ ಭಾರತೀಯ ಜನತಾ ಪಾರ್ಟಿಯ ಆಂತರಿಕ ವಲಯದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರ ಹೊಸ...

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

by Shwetha
April 1, 2026
0

ರಾಜ್ಯದಲ್ಲಿ ನಡೆಯಲಿರುವ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ....

ಸಮಾಜವಾದಿ ಸಿದ್ದರಾಮಯ್ಯ ಈಗ ಮಜಾರಾಮಯ್ಯ ಸಾಲದರಾಮಯ್ಯ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆರ್ ಅಶೋಕ್ ತೀವ್ರ ವಾಗ್ದಾಳಿ

ಸಮಾಜವಾದಿ ಸಿದ್ದರಾಮಯ್ಯ ಈಗ ಮಜಾರಾಮಯ್ಯ ಸಾಲದರಾಮಯ್ಯ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆರ್ ಅಶೋಕ್ ತೀವ್ರ ವಾಗ್ದಾಳಿ

by Shwetha
April 1, 2026
0

ದಾವಣಗೆರೆ: ರಾಜ್ಯ ಸರ್ಕಾರದ ಆರ್ಥಿಕ ನಿರ್ವಹಣೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ ವೈಖರಿ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ತೀವ್ರ ವಾಗ್ದಾಳಿ...

SSLC ತೃತೀಯ ಭಾಷೆ ಹಿಂದಿಗೆ ಅಂಕ ಬದಲು ಗ್ರೇಡ್: ಹೊರಟ್ಟಿ ಖಂಡನೆ

SSLC ತೃತೀಯ ಭಾಷೆ ಹಿಂದಿಗೆ ಅಂಕ ಬದಲು ಗ್ರೇಡ್: ಹೊರಟ್ಟಿ ಖಂಡನೆ

by Shwetha
April 1, 2026
0

SSLC ಪರೀಕ್ಷೆಯಲ್ಲಿ ತೃತೀಯ ಭಾಷೆ ಹಿಂದಿಗೆ ಅಂಕಗಳ ಬದಲು ಗ್ರೇಡ್ ನೀಡುವ ಸರ್ಕಾರದ ನಿರ್ಧಾರಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ...

ತುತ್ತು ಎನ್ನುವ ಬದಲು ಕಚ್ಚುವಿಕೆ ಎಂದ ಬ್ಯಾಟರ್ ಬಾಕ್ಸ್ ಗೂಗಲ್ ಅನುವಾದ ನಂಬಿ ಕನ್ನಡ ಕುಲಗೆಡಿಸಿದ ಕಂಪನಿಗೆ ಕನ್ನಡಿಗರ ಛೀಮಾರಿ

ತುತ್ತು ಎನ್ನುವ ಬದಲು ಕಚ್ಚುವಿಕೆ ಎಂದ ಬ್ಯಾಟರ್ ಬಾಕ್ಸ್ ಗೂಗಲ್ ಅನುವಾದ ನಂಬಿ ಕನ್ನಡ ಕುಲಗೆಡಿಸಿದ ಕಂಪನಿಗೆ ಕನ್ನಡಿಗರ ಛೀಮಾರಿ

by Shwetha
April 1, 2026
0

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾಷಾ ವಿವಾದಗಳು ಹೊಸದೇನಲ್ಲ. ಆದರೆ ಈ ಬಾರಿ ವಿವಾದಕ್ಕೆ ಕಾರಣವಾಗಿರುವುದು ನಾಮಫಲಕದ ಅಳತೆಯಲ್ಲ, ಬದಲಾಗಿ ಕನ್ನಡ ಭಾಷೆಯ ಕಗ್ಗೊಲೆ. ಸ್ಥಳೀಯ ಮಾರುಕಟ್ಟೆಯಲ್ಲಿ ವ್ಯಾಪಾರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram