Tejaswi yadav
ಬಿಹಾರ್: ಬಿಹಾರದಲ್ಲಿ 2ನೇ ಸುತ್ತಿನ ಪ್ರಚಾರದ ವೇಳೆ ತೇಜಸ್ವಿ ಯಾದವ್ ಅವರನ್ನು ಜಂಗಲ್ ರಾಜ್ ಕ ಯುವರಾಜ್ ಎಂದು ಕರೆದಿದ್ದ ನರೇಂದ್ರ ಮೋದಿ ಅವರ ಹೇಳಿಕೆಗೆ ಮಹಾಘಟಬಂಧನದ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್ ಟಾಂಗ್ ಕೊಟ್ಟಿದ್ದಾರೆ. ಬಿಹಾರದಲ್ಲಿ ಈ ಕುರಿತು ಪ್ರತಿಕ್ರಿಯೆ ನೀಡಿರುವ ತೇಜಸ್ವಿ ಯಾದವ್ ಪ್ರಧಾನಿ ನರೇಂದ್ರ ಮೋದಿ ಭ್ರಷ್ಟಾಚಾರ, ನಿರುದ್ಯೋಗ ಮತ್ತು ವಲಸೆ ಕಾರ್ಮಿಕರ ಸಮಸ್ಯೆಯಂತಹ ವಾಸ್ತವ ಸಂಗತಿಗಳನ್ನು ಮರೆಮಾಚಿ ಅನಗತ್ಯ ವಿಷಯಗಳ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಇದೇ ವೇಳೆ ಮೋದಿಯವರು ದೇಶದ ಪ್ರಧಾನ ಮಂತ್ರಿ, ಅವರು ಏನು ಬೇಕಾದರೂ ಹೇಳಬಹುದು. ಅದಕ್ಕೆ ಪ್ರತಿಕ್ರಿಯೆ ನೀಡಲು ನನಗೆ ಇಷ್ಟವಿಲ್ಲ. ಆದರೆ ಅವರು ಬಂದಿದ್ದು ಬಿಹಾರಕ್ಕೆ. ಇಲ್ಲಿಗೆ ಬಂದು ಚುನಾವಣೆ ಸಂದರ್ಭದಲ್ಲಿ ವಿಶೇಷ ಪ್ಯಾಕೇಜ್ ಘೋಷಣೆ, ನಿರುದ್ಯೋಗ ಸಮಸ್ಯೆ, ಇನ್ನೂ ಅನೇಕ ಪ್ರಮುಖ ವಿಷಯಗಳ ಬಗ್ಗೆ ಮಾತನಾಡಬಹುದಾಗಿತ್ತು. ಅದು ಬಿಟ್ಟು ಅನಗತ್ಯ ವಿಷಯಗಳನ್ನು ಮಾತನಾಡಿ ಹೋಗಿದ್ದಾರೆ ಎಂದು ಕಿಡಿಕಾರಿದ್ದಾರೆ.
ಅಲ್ಲದೇ ಬಿಜೆಪಿ ವಿಶ್ವದಲ್ಲಿ ಅತಿದೊಡ್ಡ ಪಕ್ಷ. 30 ಹೆಲಿಕಾಪ್ಟರ್ ಬಳಸುತ್ತಿದ್ದಾರೆ. ಅಂತ ಪಕ್ಷದ ಪ್ರಧಾನಿಯೇ ಹೀಗೆ ಮಾತನಾಡಿದರೆ ದೇಶದ ಜನರು ತೀರ್ಮಾನ ಮಾಡುತ್ತಾರೆ. ಅವರು ಬಡತನ, ನಿರುದ್ಯೋಗ ಸಮಸ್ಯೆ, ರೈತರು, ಕಾರ್ಖಾನೆಗಳ ಸಮಸ್ಯೆಗಳ ಬಗ್ಗೆ ಮಾತನಾಡಬಹುದಿತ್ತು. ಆದರೆ ಅವರು ವೃಥಾ ಅನಗತ್ಯ ವಿಚಾರಗಳ ಬಗ್ಗೆ ಮಾತನಾಡುತ್ತಿರುವುದು ಸರಿಯಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅಯ್ಯೋ.. ಮುನಿರತ್ನ ತಾಯಿಯನ್ನು ಮಾರಾಟ ಮಾಡಲಿಲ್ಲವೇ ? ಡಿಕೆಶಿ ಪ್ರಶ್ನೆ
Tejaswi yadav
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








