ಬೆಂಗಳೂರು: ಲೋಕಸಭಾ ಚುನಾವಣೆ ಸಂದರ್ಭದಲ್ಲಿಯೇ ಬಿಜೆಪಿ ಎಂಎಲ್ ಸಿ ಆಗಿದ್ದ ತೇಜಸ್ವಿನಿಗೌಡ ಅವರು ಪಕ್ಷ ತೊರೆದು ಬಿಜೆಪಿ ಸೇರಿದ್ದಾರೆ.
ದೆಹಲಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ತೇಜಸ್ವಿನಿ ಗೌಡ ಕಾಂಗ್ರೆಸ್ ಸೇರಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ. ಟಿಕೆಟ್ ಸಿಗದೆ ಅಸಮಾಧಾನಗೊಂಡಿದ್ದ ಬಿಜೆಪಿ ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ಕೆಲವು ದಿನಗಳ ಹಿಂದಷ್ಟೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಸುಮಾರು ಹತ್ತು ವರ್ಷಗಳ ಹಿಂದೆ ಕಾಂಗ್ರೆಸ್‌ನಿಂದ ಬಿಜೆಪಿಗೆ ವಲಸೆ ಬಂದಿದ್ದ ತೇಜಸ್ವಿನಿ, ಮತ್ತೆ ಕಾಂಗ್ರೆಸ್‌ಗೆ ಮರಳಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ತೇಜಸ್ವಿನಿ ಮೈಸೂರು ಅಥವಾ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ಬಯಸಿದ್ದರು. ಟಿಕೆಟ್ ಸಿಗದಿದ್ದರಿಂದಾಗಿ ಘರ್ ವಾಪ್ಸಿ ಆಗಿದ್ದಾರೆ ಎನ್ನಲಾಗುತ್ತಿದೆ.