ಪುಷ್ಪ 2′ (Pushpa 2) ಸಿನಿಮಾ ಪ್ರದರ್ಶನದ ಸಂದರ್ಭದಲ್ಲಿ ಕಾಲ್ತುಳಿತ ಪ್ರಕರಣ ನಡೆದು ಮಹಿಳೆ ಸಾವನ್ನಪ್ಪಿದ ಪ್ರಕರಣ ದೊಡ್ಡ ವಿವಾದಕ್ಕೆ ಕಾರಣವಾಗುತ್ತಿದೆ.
ಈ ವಿಷಯ ಸರ್ಕಾರ ಹಾಗೂ ಸ್ಟಾರ್ಸ್ ಮಧ್ಯೆ ದೊಡ್ಡ ವಿವಾದವನ್ನೇ ಸೃಷ್ಟಿಸಿದೆ. ಈ ಮಧ್ಯೆ ರಾಜಿ ಸಂಧಾನಕ್ಕೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರನ್ನು (Revanth Reddy) ಟಾಲಿವುಡ್ ಸ್ಟಾರ್ಸ್ ಭೇಟಿಯಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಟಾಲಿವುಡ್‌ಗೆ ಸಿಎಂ ರೇವಂತ್ ಎಚ್ಚರಿಕೆ ನೀಡಿದ್ದಾರೆ.
ಕಾಲ್ತುಳಿತ ಪ್ರಕರಣದ ನಂತರ ಸರ್ಕಾರ ವರ್ಸಸ್ ಚಿತ್ರರಂಗ ಎನ್ನುವ ವಾತಾವರಣ ನಿರ್ಮಾಣವಾಗಿತ್ತು. ಪ್ರಕರಣ ತೀವ್ರ ಸ್ವರೂಪ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಸಂಧಾನಕ್ಕೆ ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ್, ನಾಗಾರ್ಜುನ, ವೆಂಕಟೇಶ್ ಸೇರಿದಂತೆ ಅನೇಕರು ಬಂದಿದ್ದರು. ಈ ವೇಳೆ ಸಿಎಂ ರೇವಂತ್ ರೆಡ್ಡಿ ಅವರು ತೆಲುಗಿನ ಕಲಾವಿದರಿಗೆ ಸಾಮಾಜಿಕ ಜವಾಬ್ದಾರಿಯ ಪಾಠ ಮಾಡಿದ್ದರು.
ಮಾತುಕತೆಯ ಸಂದರ್ಭದಲ್ಲಿ ನಟನ ವರ್ತನೆ ಬಗ್ಗೆ ಸಿಎಂ ರೇವಂತ್ ರೆಡ್ಡಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಅಭಿಮಾನಿಗಳನ್ನು ನಿಯಂತ್ರಿಸುವ ಜವಾಬ್ದಾರಿಯನ್ನು ಸೆಲೆಬ್ರಿಟಿಗಳು ಹೊಂದಿರಬೇಕು ಮತ್ತು ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು. ಚಿತ್ರರಂಗದ ಬಗ್ಗೆ ನಮಗೆ ಯಾವ ದ್ವೇಷ ಇಲ್ಲ. ನಿರ್ಮಾಪಕರೊಂದಿಗೆ ಸರ್ಕಾರ ಎಂದೆಂದು ಇರುತ್ತದೆ ಎಂದಿದ್ದಾರೆ.
ಜೈಲಿನಿಂದ ಬಿಡುಗಡೆಯಾದ ನಂತರ ಅಲ್ಲು ಅರ್ಜುನ್ ಅವರ ಮನೆಗೆ ಇಡೀ ಚಿತ್ರರಂಗ ಸಾಲುಗಟ್ಟಿ ನಿಂತಿದ್ದೀರಿ. ಆದರೆ ಆಸ್ಪತ್ರೆಯಲ್ಲಿರುವ ತೀವ್ರ ಅಸ್ವಸ್ಥವಾಗಿದ್ದ ಮೃತ ರೇವತಿ ಪುತ್ರ ಶ್ರೀತೇಜ ಬಗ್ಗೆ ಯಾರು ಯೋಚಿಸಲಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.