ತೆಲಂಗಾಣದ ಕಾಂಗ್ರೆಸ್ ನಾಯಕ ವಿ. ಹನುಮಂತ ರಾವ್ ಗೆ ಕೊರೊನಾ ಸೋಂಕು
ಹೈದರಾಬಾದ್, ಜೂನ್ 22 : ತೆಲಂಗಾಣದ ಹಿರಿಯ ಕಾಂಗ್ರೆಸ್ ನಾಯಕ ವಿ. ಹನುಮಂತ ರಾವ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಅನಾರೋಗ್ಯದ ಹಿನ್ನಲೆಯಲ್ಲಿ ಅವರು ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ವೇಳೆ ಅವರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದೀಗ ಹೈದರಾಬಾದ್ ಆಸ್ಪತ್ರೆಯ ವೈದ್ಯರು ಅವರ ಆರೋಗ್ಯದ ಮೇಲೆ ನಿಗಾ ವಹಿಸಿದ್ದು, ಕೊರೊನಾ ಸೋಂಕಿನ ಚಿಕಿತ್ಸೆಯನ್ನು ನೀಡುತ್ತಿದ್ದಾರೆ.
ಅಧಿಕಾರಿಗಳು ಹನುಮಂತ ರಾವ್ ಅವರಿಗೆ ಕೊರೊನಾ ಸೋಂಕು ತಗುಲಿರುವ ಸೋಂಕಿನ ಮೂಲದ ಮಾಹಿತಿ ಪತ್ತೆಹಚ್ಚುವುದರಲ್ಲಿ ಕಾರ್ಯ ನಿರತರಾಗಿದ್ದು, ರಾವ್ ಅವರ ಸಂಪರ್ಕದಲ್ಲಿದ್ದವರನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಗೆ ಒಳಪಡಿಸಲಾಗುತ್ತಿದೆ . ಕೆಲ ದಿನಗಳ ಹಿಂದೆ ಗಾಂಧಿ ಆಸ್ಪತ್ರೆಯಲ್ಲಿ ವೈದ್ಯರೊಬ್ಬರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಹನುಮಂತ ರಾವ್ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದು, ಆ ಸಮಯದಲ್ಲಿ ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿರಬಹುದು ಎಂದು ಶಂಕಿಸಲಾಗಿದೆ. ಹನುಮಂತರಾವ್ ಅವರನ್ನು ಹೈದರಾಬಾದ್ ನ ಆಸ್ಪತ್ರೆಯ ಐಸೋಲೇಶನ್ ನಲ್ಲಿ ದಾಖಲಿಸಿ ಕೊರೊನಾ ಸೋಂಕಿನ ಚಿಕಿತ್ಸೆ ನೀಡಲಾಗುತ್ತಿದೆ.