Telangana News
Heavy Rain
ಭಾರೀ ಮಳೆಯಿಂದಾಗಿ ತೆಲಂಗಾಣದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ಎಜೆ ಘೋಷಣೆ ಮಾಡಲಾಗಿದೆ.. ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲೂ ಭಾರೀ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.. ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ…
ಈಗ ತೆಲಂಗಾಣದಲ್ಲೂ ಧಾರಾಕಾರ ಮಳೆಯಿಂದಾಗಿ ಎಲ್ಲಾ ಇಲಾಖೆಗಳು ಕಟ್ಟೆಚ್ಚರ ವಹಿಸಿವೆ.. ಯಾವುದೇ ಪ್ರಾಣಹಾನಿ , ಇನ್ನಿತರೇ ಅಪಾಯಗಳು ಸಂಭವಿಸದಂತೆ ಕ್ರಮಗಳನ್ನು ತೆಗೆದುಕೊಳ್ಳಲಾಗ್ತಿದೆ..
ಸೋಮವಾರದಿಂದ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಿಗೆ ಮೂರು ದಿನಗಳ ರಜೆ ಘೋಷಿಸಿದ್ದಾರೆ. ಸಂಪುಟ ಸಚಿವರು, ಮುಖ್ಯ ಕಾರ್ಯದರ್ಶಿ ಸೋಮೇಶ್ ಕುಮಾರ್ ಮತ್ತು ಇತರ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಪರಿಸ್ಥಿತಿಯನ್ನು ಸಿಎಂ ಅವಲೋಕಿಸಿಪದ್ದಾರೆ..
ಕರ್ನಾಟಕದ ಕರಾವಳಿ ಪ್ರದೇಶಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಭಾನುವಾರ ನಿರಂತರ ಭಾರೀ ಮಳೆಯಾಗಿದ್ದು, ಜಿಲ್ಲೆಗಳಲ್ಲಿ ತಗ್ಗು ಪ್ರದೇಶಗಳು ಮತ್ತು ಕಟ್ಟಡಗಳು ಮುಳುಗಿವೆ. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಎರಡು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಶಾಲೆಗಳು ಮತ್ತು ಅಂಗನವಾಡಿಗಳಿಗೆ ಸೋಮವಾರ ರಜೆ ಘೋಷಿಸಿದ್ದಾರೆ.
ಅಲ್ಲದೆ, ಕೇರಳದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಭಾನುವಾರ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ದಿನದ ಆರೆಂಜ್ ಅಲರ್ಟ್ ಘೋಷಿಸಿದೆ. ಐಎಂಡಿ ಸಂಜೆ 4 ಗಂಟೆಗೆ ಉತ್ತರ ಕೇರಳದ ಕೋಝಿಕ್ಕೋಡ್, ವಯನಾಡು, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ತಿರುವನಂತಪುರಂ ಮತ್ತು ಕೊಲ್ಲಂ ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಿದೆ. ರೆಡ್ ಅಲರ್ಟ್ 24-ಗಂಟೆಗಳ ಅವಧಿಯಲ್ಲಿ 20 ಸೆಂ.ಮೀ ಗಿಂತ ಹೆಚ್ಚಿನ ಭಾರೀ ಮಳೆಯನ್ನು ಸೂಚಿಸುತ್ತದೆ, ಆದರೆ ಆರೆಂಜ್ ಅಲರ್ಟ್ ಎಂದರೆ 6 ಸೆಂ.ಮೀ ನಿಂದ 20 ಸೆಂ.ಮೀ ವರೆಗೆ ಅತಿ ಹೆಚ್ಚು ಮಳೆಯಾಗುತ್ತದೆ ಎಂದರ್ಥ. ಹಳದಿ ಎಚ್ಚರಿಕೆ ಎಂದರೆ 6 ರಿಂದ 11 ಸೆಂ.ಮೀ ನಡುವೆ ಭಾರೀ ಮಳೆಯಾಗುತ್ತದೆ ಎಂದರ್ಥ.