ಕೆಲ ದುಷ್ಕರ್ಮಿಗಳು ತೆಲುಗಿನ ಖ್ಯಾತ ನಟ ಮೋಹನ್ ಬಾಬು ಮನೆಗೆ ನುಗ್ಗಿ ಕೊಲ್ಲುವುದಾಗಿ ಬೆದರಿಕೆ ಒಡ್ಡಿದ್ದಾರೆ. ನಿನ್ನೆ ತಡರಾತ್ರಿ ನಾಲ್ವರು ಅಪರಿಚಿತರು ಇನ್ನೋವಾ ಕಾರಿನಲ್ಲಿ ಮೋಹನ್ ಬಾಬು ಅವರ ನಿವಾಸಕ್ಕೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಈ ಸಂಬಂಧ ಮೋಹನ್ ಅವರು ಪಹಡಿ ಷರೀಫ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ರಾಜಕೀಯ ಹಾಗೂ ನಟನೆ ಎರಡರಲ್ಲೂ ಸಕ್ರಿಯರಾಗಿರುವ ಮೋಹನ್ ಬಾಬು ಅವರಿಗೆ ಕೊಲೆ ಬೆದರಿಕೆ ಯಾವ ಕಾರಣಕ್ಕೆ ಬಂದಿದೆ ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ.
ಇನ್ನೂ ತನಿಖೆ ವೇಳೆ ಈ ಕಾರು ವಿಜಯಲಕ್ಷ್ಮಿ ಎಂಬ ಮಹಿಳೆಯ ಹೆಸರಿನಲ್ಲಿ ನೊಂದಣಿಯಾಗಿದ್ದು, ಕಾರಿನ ಸಂಖ್ಯೆ ಂಓ ಂP 31 0004 ಎಂಬುದು ತಿಳಿದುಬಂದಿದೆ. ಮತ್ತೊಂದೆಡೆ ಈ ಬಗ್ಗೆ ನಟನ ಕುಟುಂಬಸ್ಥರು ಯಾವುದೇ ಮಾಹಿತಿಯನ್ನು ಬಹಿರಂಗಗೊಳಿಸದೇ ಇರುವುದು ಸಾಕಷ್ಟು ಕುತೂಹಲಗಳಿಗೆ ಎಡೆ ಮಾಡಿಕೊಟ್ಟಿದೆ. ಅಲ್ಲದೇ ಯಾವ ವಿಚಾರವಾಗಿ ಈ ಕೃತ್ಯ ವೆಸಲಾಗಿದೆ ಎಂಬುದು ಸಂಪೂರ್ಣ ತನಿಖೆಯ ನಂತರವಷ್ಟೇ ಬಹಿರಂಗವಾಗಲಿದೆ. 
ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ
ರಾಜ್ಯ ಸರ್ಕಾರಿ ಉದ್ಯೋಗವನ್ನು ಪಡೆಯಬೇಕು ಹಾಗೂ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂಬ ಕನಸು ಹೊತ್ತಿರುವ ನಾಡಿನ ಅಸಂಖ್ಯಾತ ಉದ್ಯೋಗಾಕಾಂಕ್ಷಿಗಳಿಗೆ ಹಾಗೂ ಅನುಭವಿ ವೃತ್ತಿಪರರಿಗೆ ಕರ್ನಾಟಕ ರಾಜ್ಯ ಕಂದಾಯ...








