ಭಾರೀ ಮಳೆಯಿಂದಾಗಿ ತತ್ತರಿಸಿರುವ ಜನರಿಗೆ ಮತ್ತೊಂದು ಶಾಕ್ ಎದುರಾಗಿದೆ. ರಾಜ್ಯಾದ್ಯಂತ ತಾಪಮಾನ ಕುಸಿತವಾಗಿದ್ದು, ಬರುವ ಕೆಲವು ದಿನಗಳಲ್ಲಿ ಚಳಿ ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಚಳಿಯು ಹೆಚ್ಚಾಗಿದ್ದು, ವಾಡಿಕೆಗಿಂತ 2 ರಿಂದ 3 ಡಿಗ್ರಿ ಉಷ್ಣಾಂಶ ಕಡಿಮೆ ಇರುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವು ಜಿಲ್ಲೆಗಳಲ್ಲಿ ಇಂದು (ನ.22) ಕನಿಷ್ಠ ಉಷ್ಣಾಂಶ 15 ಡಿಗ್ರಿ ಸೆಂಟಿಗ್ರೇಡ್ಗಿಂತ ಕಡಿಮೆ ಇದೆ. ಮುಂದಿನ ದಿನಗಳಲ್ಲಿ ಕನಿಷ್ಠ 12 ಡಿಗ್ರಿ ಸೆಲ್ಸಿಯಸ್ವರೆಗೆ ಇಳಿಕೆಯಾಗುವ ಸಾಧ್ಯತೆ ಇದೆ.
ರಾಜ್ಯಾದ್ಯಂತ ಚಳಿ ಹೆಚ್ಚಾಗುವ ಸಾಧ್ಯತೆ ಇದ್ದು, ಜನರ ಮೇಲೆ ಹೆಚ್ಚಿನ ಪರಿಣಾಮ ಬೀರುವ ಸಾಧ್ಯತೆ ಇದೆ. ಹವಾಮಾನವು ಈ ಬಾರಿ ತುಂಬಾ ಬದಲಾಗುತ್ತಿದ್ದು, ತಾಪಮಾನದ ಕುಸಿತದಿಂದ, ಕೆಲವರು ಆರೋಗ್ಯ ಸಮಸ್ಯೆಗಳನ್ನು ಎದುರಿಸಬಹುದು. ಇದರಿಂದಾಗಿ, ಸಾರ್ವಜನಿಕರು ಚಳಿಯನ್ನು ಸಮರ್ಥವಾಗಿ ಎದುರಿಸಲು ಸೂಕ್ತ ಉಡುಪುಗಳನ್ನು ಧರಿಸುವುದು, ಬಿಸಿಯೂಟ ಸೇವಿಸುವುದು ಹಾಗೂ ಲಘು ವ್ಯಾಯಾಮಗಳನ್ನು ಮಾಡುವುದು ಅಗತ್ಯವಾಗಿದೆ.








