ದೇವಾಲಯಗಳು ಸ್ವತಂತ್ರವಾದ್ರೆ ಅಭಿವೃದ್ಧಿಗೊಳ್ಳುತ್ತವೆ: ಕೋಟ ಶ್ರೀನಿವಾಸ ಪೂಜಾರಿ Saaksha Tv
ಮಡಿಕೇರಿ: ದೇವಸ್ಥಾನಗಳನ್ನು ಸ್ವತಂತ್ರಗೊಳಿಸಿದರೆ ಒಂದಿಷ್ಟು ಅಭಿವೃದ್ಧಿಗೊಳ್ಳುತ್ತವೆ. ದೇವಾಲಯಗಳನ್ನು ಭಕ್ತರ ಕೈಗೆ ಕೊಡುವುದರಲ್ಲಿ ತಪ್ಪೇನಿಲ್ಲ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು
ಕೊಡಗಿನ ಪಾಲಿಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಷ್ಟೋ ಹಿಂದೂ ದೇವಾಲಯಗಳಲ್ಲಿ ಎಣ್ಣೆ – ಬತ್ತಿಗೂ ಹಣವಿಲ್ಲ. ಹಿಂದೂ ದೇವಾಲಯಗಳ ಆಸ್ತಿಯನ್ನು ಖಾಸಗೀಕರಣ ಮಾಡುವ ಉದ್ದೇಶದಿಂದ, ಸರ್ಕಾರದ ಹಿಡಿತದಿಂದ ಸ್ವಾತಂತ್ರಗೊಳಿಸಲಾಗುತ್ತಿದೆ ಎಂಬ ಸಿದ್ದರಾಮಯ್ಯನವರ ಹೇಳಿಕೆಗೆ ಟಾಂಗ್ ಕೊಟ್ಟರು.
ಅವರು ಹಿಂದೂ ಆಗಿದ್ದರು ಅವರು ಯಾಕೆ ವಿರೋಧ ಮಾಡುತ್ತಿದ್ದಾರೋ ತಿಳಿಯುತ್ತಿಲ್ಲ. ಸಾಮಾಜಿಕ ನ್ಯಾಯಕ್ಕೆ ಧಕ್ಕೆಯಾದಾಗ, ಆರ್ಥಿಕ ಅಪರಾಧಗಳಾದಾಗ ಸರ್ಕಾರ ಕ್ರಮ ಕೈಗೊಳ್ಳುತ್ತದೆ. ಆದರೆ ಕಾಂಗ್ರೆಸ್‌ನವರು ಈ ವಿಚಾರದಲ್ಲಿ ಯಾಕೆ ಭಯಗೊಳ್ಳುತ್ತಿದೆ ಗೊತ್ತಿಲ್ಲ. ಮಸೀದಿ ಹಾಗೂ ಚರ್ಚ್ಗಳು ಆಯಾ ಸಮುದಾಯಗಳ ಆಡಳಿತದಲ್ಲಿದೆ. ಆದರೆ ಹಿಂದೂ ದೇವಾಲಯಗಳು ಸರ್ಕಾರದ ಆಡಳಿತದಲ್ಲಿದೆ ಎಂದರು.