ಕೋಲಾರ: ದೇಗುಲಕ್ಕೆ ಟೆಂಪೊವೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಜಿಲ್ಲೆಯ ಮಾಲೂರು (Malur) ತಾಲೂಕಿನ ಮಾಸ್ತಿ ಹತ್ತಿರ ಹಸಾಂಡಹಳ್ಳಿ (Hasandahalli) ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದಲ್ಲಿನ ಮುನೇಶ್ವರ ದೇಗುಲಕ್ಕೆ ಟೆಂಪೊ ಡಿಕ್ಕಿ ಹೊಡೆದಿದೆ. ಪರಿಣಾಮ ಮಾಸ್ತಿ ಗ್ರಾಮದ ಚಂದ್ರಶೇಖರ್ (38) ಸಾವನ್ನಪ್ಪಿದ್ದಾರೆ. ಮಹೇಂದ್ರ ಟೆಂಪೊ ದೇಗುಲಕ್ಕೆ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಪೂಜೆ ಮಾಡುತ್ತಿದ್ದ ಮೂವರು ಮಹಿಳೆಯರು ಗಂಭೀರ ಗಾಯಗೊಂಡಿದ್ದು, ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಚಾಲಕನ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ.