ADVERTISEMENT
Wednesday, April 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Health

ಔಷಧಿಗಳ ಪಿತಾಮಹ ಅಳಲೆಕಾಯಿ ಎಂಬ ದಿವ್ಯ ಸಂಜೀವಿನಿಯ ಬಹು ವಿಧದ ಉಪಯೋಗಗಳೇನು ಗೊತ್ತಾ?

admin by admin
July 30, 2020
in Health, Newsbeat, ಆರೋಗ್ಯ
Share on FacebookShare on TwitterShare on WhatsappShare on Telegram

ಔಷಧಿಗಳ ಪಿತಾಮಹ ಅಳಲೆಕಾಯಿ ಎಂಬ ದಿವ್ಯ ಸಂಜೀವಿನಿಯ ಬಹು ವಿಧದ ಉಪಯೋಗಗಳೇನು ಗೊತ್ತಾ?

ಅಳಲೆಕಾಯಿಯನ್ನು ಟಿಬೆಟ್‍ನಲ್ಲಿ ಔಷಧಿಗಳ ರಾಜ ಎಂದು ಕರೆಯುತ್ತಾರೆ. ನಮ್ಮ ದೇಶದ ಆಯುರ್ವೇದ ವೈದ್ಯಪದ್ಧತಿಯಲ್ಲೂ ಅಳಲೆಕಾಯಿಯ ಔಷಧೀಯ ಗುಣಗಳಿಗೆ ವಿಶೇಷ ಮಹತ್ವವಿದೆ. ಈಗಲೂ ನಾಟಿ ವೈದ್ಯ, ಗಿಡಮೂಲಿಕೆಗಳ ಕಷಾಯ ಕೊಡುವವರಿಗೆ ಅಳಲೆಕಾಯಿ ಪಂಡಿತ ಎಂದು ಗುರುತಿಸುವ ವಾಡಿಕೆ ನಮ್ಮ ಗ್ರಾಮೀಣ ಪ್ರದೇಶಗಳಲ್ಲಿದೆ. ದಕ್ಷಿಣ ಏಷ್ಯಾ ಇದರ ತವರು. ಇದನ್ನು ಸಸ್ಯಶಾಸ್ತ್ರೀಯ ಭಾಷೆಯಲ್ಲಿ ಟರ್ಮಿನಲಿಯ ಚೆಬುಲಾ (Terminalia chebula) ಎಂದು ಕರೆಯಲಾಗುತ್ತದೆ, ಇದು ‘ಕಾಂಬ್ರೆಟೇಸಿ’ (Combretaceae) ಎನ್ನುವ ಕುಟುಂಬಕ್ಕೆ ಸೇರಿದ ಸಸ್ಯ. ಅಜ್ಜಿಯ ಔಷದಿ ಎಂದೂ ಗುರುತಿಸಲಾಗುವ ಅಳಲೇಕಾಯಿಯನ್ನು ಸಂಸ್ಕೃತದಲ್ಲು ಹರೀತಕಿ ಎನ್ನುತ್ತಾರೆ. ಭಾರತೀಯ ಪ್ರಾಚೀನ ವೈದ್ಯ ಪದ್ಧತಿಯಲ್ಲೂ ರಾಜಗೌರವ ಹೊಂದಿರುವ ಅಳಲೆಕಾಯಿಯನ್ನು ಶತಶತಮಾನಗಳಿಂದ ನಮ್ಮ ಆಯುರ್ವೇದ, ಮೂಲಿಕಾ ಔಷದ ಮತ್ತು ಸಿದ್ಧೌಷದ ಪದ್ಧತಿಯಲ್ಲಿ ಬಳಸಿಕೊಂಡು ಬರಲಾಗಿದೆ.

Related posts

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

April 1, 2026
ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

April 1, 2026

ಆಯುರ್ವೇದದಲ್ಲಿ ಅಳಲೆಕಾಯಿಯನ್ನು ಸರ್ವರೋಗ ನಿವಾರಿಣಿ ಎಂದು ಕರೆಯಲಾಗಿದೆ. ದೇಹದಲ್ಲಿನ ನಂಜನ್ನು ಹೊರಹಾಕಲು ಇದು ಬಹುಮುಖ್ಯವಾದ ಔಷಧಿ ಎಂದು ಹೇಳಲಾಗುತ್ತದೆ. ದೇಹದಲ್ಲಿನ ಅಂಗಾಂಶಗಳ ಬೆಳವಣಿಗೆ ಮತ್ತು ಉತ್ತಮ ಆರೋಗ್ಯ ನಿರ್ವಹಣೆಗೆ ಇದು ಸಹಕಾರಿ. ಆಧುನಿಕ ವೈದ್ಯಕೀಯ ಪ್ರಯೋಗಗಳು ಅಳಲೆಕಾಯಿಯಲ್ಲಿ ಹೆಚ್ ಎಸ್ ವಿ ಎಂದು ಕರೆಯಲಾಗುವ ವೈರಸ್‍ನ ಪರಿಣಾಮಗಳನ್ನು ತಡೆಯಬಲ್ಲ ಪರಿಣಾಮಕಾರಿ ಅಂಶಗಳಿವೆ ಎಂದು ಹೇಳಿವೆ. ಬ್ಯಾಕ್ಟೀರಿಯಾ ಚಟುವಟಿಕೆಗಳನ್ನು ನಿಗ್ರಹಿಸುವ ಮತ್ತು ಹೃದಯಕ್ಕೆ ಅನುಕೂಲಕರವಾದ ಅಂಶಗಳನ್ನು ಹೊಂದಿರುವ ಅತ್ಯುತ್ತಮ ಔಷಧಿ ಎಂದು ಹೇಳಿವೆ.

ಜೀರ್ಣಾಂಗ ವ್ಯವಸ್ಥೆಯಲ್ಲಿರುವ ದೋಷಗಳನ್ನೂ ಈ ಅಳಲೆಕಾಯಿ ಸರಿಪಡಿಸುತ್ತದೆ. ಮಲಬದ್ಧತೆ, ವಾತದೋಷಕ್ಕೂ ಇದು ಪರಿಹಾರ. ಆಯುರ್ವೇದದ ಪ್ರಮುಖ ಚೂರ್ಣಗಳಲ್ಲಿ ಒಂದಾದ ತ್ರಿಫಲಾ ಚೂರ್ಣದಲ್ಲಿ ಅಳಲೆಯೂ ಒಂದು ಹಾಗೂ ಪ್ರಮುಖ. ರಾತ್ರಿಯಿಡೀ ಅಳಲೆಕಾಯಿಗಳನ್ನು ನೆನೆಸಿಟ್ಟ ನೀರಿನಲ್ಲಿ ಬೆಳಗ್ಗೆ ಎದ್ದ ತಕ್ಷಣ ಕಣ್ಣುಗಳನ್ನು ಸ್ವಚ್ಛಗೊಳಿಸಿಕೊಂಡರೆ ಕಣ್ಣುಗಳು ತಂಪಾಗುತ್ತವೆ.
ಮಲಬದ್ಧತೆಯಿಂದ ಬಳಲುತ್ತಿದ್ದರೆ ಅಳಲೆಕಾಯಿಯನ್ನು ಹಸುವಿನ ತುಪ್ಪದಲ್ಲಿ ಹುರಿದು ನಂತರ ಉಪ್ಪಿನ ಜೊತೆ ಸೇರಿಸಿ ಪುಡಿ ಮಾಡಿ ಪ್ರತಿದಿನ ರಾತ್ರಿ ಮಲಗುವ ಮುನ್ನ ಚಿಟಿಕೆ ಪುಡಿಯನ್ನು ಬಿಸಿ ನೀರಿನಲ್ಲಿ ಕಲಸಿ ಕುಡಿದರೆ ಸರಾಗವಾಗಿ ಮಲವಿಸರ್ಜನೆಯಾಗುತ್ತದೆ. ಚರ್ಮದ ಅಲರ್ಜಿಗೂ ಅಳಲೆ ಔಷಧವಾಗಿದೆ, ಅಳಲೆಕಾಯಿಯನ್ನು ಬಿಸಿನೀರಿನಲ್ಲಿ ತೇದು ಚರ್ಮಕ್ಕೆ ಹಚ್ಚಿದರೆ ಸಮಸ್ಯೆ ಪರಿಹಾರವಾಗುತ್ತದೆ. ಅಳಲೆಕಾಯಿ ಪುಡಿಗೆ ಶುಂಠಿಪುಡಿಯನ್ನು ಸೇರಿಸಿ ಅದನ್ನು ಬೆಲ್ಲದ ಜೊತೆ ತಿಂದರೆ ಅಜೀರ್ಣ ಮಾಯವಾಗುತ್ತದೆ.

ಕೂದಲು ಉದುರುತ್ತಿದ್ದರೆ, ತಲೆಯಲ್ಲಿ ಹೊಟ್ಟು, ಹೇನು ಇದ್ದರೆ ಒಂದು ಕಪ್ ಕೊಬ್ಬರಿ ಎಣ್ಣೆಗೆ 3 ರಿಂದ 5 ಅಳಲೆಕಾಯಿ ಹಾಕಿ ಒಡೆಯುವ ತನಕ ಚೆನ್ನಾಗಿ ಕುದಿಸಿ ತಣ್ಣಗಾದ ಮೇಲೆ ಡಬ್ಬಿಗೆ ಹಾಕಿಟ್ಟು ಪ್ರತಿದಿನ ಬಳಸುವುದರಿಂದ ಸರಿಯಾಗುತ್ತದೆ. ಇನ್ನು ತೂಕ ಕಡಿಮೆ ಮಾಡಿಕೊಳ್ಳಲೂ ಸಹ ಅಳಲೆಕಾಯಿ ಒಳ್ಳೆಯ ಮದ್ದು. ಅಳಲೆಕಾಯಿ ಕಷಾಯಕ್ಕೆ ಜೇನುತುಪ್ಪ ಸೇರಿಸಿ ಬೆಳಗ್ಗೆ ಖಾಲಿ ಹೊಟ್ಟೆಗೆ ಕುಡಿದರೆ ದೇಹದ ತೂಕ ಬೇಗ ಕಡಿಮೆಯಾಗುತ್ತದೆ.

ಮಾಹಿತಿ ಮತ್ತು ಲೇಖನ :- ಅಂಬಿಕಾ ಸೀತೂರು

Tags: Ayurvedachebulic myrobalanCombretaceaeindiaMalaysiaSouth Asiasouthwest ChinaSri LankaTerminalia chebulaVietnam.
ShareTweetSendShare
Join us on:

Related Posts

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

by Shwetha
April 1, 2026
0

ರಾಜ್ಯ ರಾಜಕಾರಣದಲ್ಲಿ ಹಾಗೂ ವಿಶೇಷವಾಗಿ ಭಾರತೀಯ ಜನತಾ ಪಾರ್ಟಿಯ ಆಂತರಿಕ ವಲಯದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರ ಹೊಸ...

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

by Shwetha
April 1, 2026
0

ರಾಜ್ಯದಲ್ಲಿ ನಡೆಯಲಿರುವ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ....

ಸಮಾಜವಾದಿ ಸಿದ್ದರಾಮಯ್ಯ ಈಗ ಮಜಾರಾಮಯ್ಯ ಸಾಲದರಾಮಯ್ಯ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆರ್ ಅಶೋಕ್ ತೀವ್ರ ವಾಗ್ದಾಳಿ

ಸಮಾಜವಾದಿ ಸಿದ್ದರಾಮಯ್ಯ ಈಗ ಮಜಾರಾಮಯ್ಯ ಸಾಲದರಾಮಯ್ಯ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆರ್ ಅಶೋಕ್ ತೀವ್ರ ವಾಗ್ದಾಳಿ

by Shwetha
April 1, 2026
0

ದಾವಣಗೆರೆ: ರಾಜ್ಯ ಸರ್ಕಾರದ ಆರ್ಥಿಕ ನಿರ್ವಹಣೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ ವೈಖರಿ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ತೀವ್ರ ವಾಗ್ದಾಳಿ...

SSLC ತೃತೀಯ ಭಾಷೆ ಹಿಂದಿಗೆ ಅಂಕ ಬದಲು ಗ್ರೇಡ್: ಹೊರಟ್ಟಿ ಖಂಡನೆ

SSLC ತೃತೀಯ ಭಾಷೆ ಹಿಂದಿಗೆ ಅಂಕ ಬದಲು ಗ್ರೇಡ್: ಹೊರಟ್ಟಿ ಖಂಡನೆ

by Shwetha
April 1, 2026
0

SSLC ಪರೀಕ್ಷೆಯಲ್ಲಿ ತೃತೀಯ ಭಾಷೆ ಹಿಂದಿಗೆ ಅಂಕಗಳ ಬದಲು ಗ್ರೇಡ್ ನೀಡುವ ಸರ್ಕಾರದ ನಿರ್ಧಾರಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ...

ತುತ್ತು ಎನ್ನುವ ಬದಲು ಕಚ್ಚುವಿಕೆ ಎಂದ ಬ್ಯಾಟರ್ ಬಾಕ್ಸ್ ಗೂಗಲ್ ಅನುವಾದ ನಂಬಿ ಕನ್ನಡ ಕುಲಗೆಡಿಸಿದ ಕಂಪನಿಗೆ ಕನ್ನಡಿಗರ ಛೀಮಾರಿ

ತುತ್ತು ಎನ್ನುವ ಬದಲು ಕಚ್ಚುವಿಕೆ ಎಂದ ಬ್ಯಾಟರ್ ಬಾಕ್ಸ್ ಗೂಗಲ್ ಅನುವಾದ ನಂಬಿ ಕನ್ನಡ ಕುಲಗೆಡಿಸಿದ ಕಂಪನಿಗೆ ಕನ್ನಡಿಗರ ಛೀಮಾರಿ

by Shwetha
April 1, 2026
0

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾಷಾ ವಿವಾದಗಳು ಹೊಸದೇನಲ್ಲ. ಆದರೆ ಈ ಬಾರಿ ವಿವಾದಕ್ಕೆ ಕಾರಣವಾಗಿರುವುದು ನಾಮಫಲಕದ ಅಳತೆಯಲ್ಲ, ಬದಲಾಗಿ ಕನ್ನಡ ಭಾಷೆಯ ಕಗ್ಗೊಲೆ. ಸ್ಥಳೀಯ ಮಾರುಕಟ್ಟೆಯಲ್ಲಿ ವ್ಯಾಪಾರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram