ಮೈಸೂರು: ಟಾಟಾ ಏಸ್ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಹುಣಸೂರು ತಾಲೂಕಿನ ಕೆ.ಆರ್.ನಗರ ಮುಖ್ಯರಸ್ತೆಯ ಬಿಳಿಗೆರೆ ಹತ್ತಿರ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಹೇಮಂತ್(26) ಸಾವನ್ನಪ್ಪಿದ ದುರ್ದೈವಿ. ಹೇಮಂತ್ ಕೆ.ಆರ್.ನಗರದಿಂದ ಹುಣಸೂರಿಗೆ ತೆರಳುತ್ತಿದ್ದ ಎನ್ನಲಾಗಿದ್ದು, ಟಾಟಾ ಏಸ್ ಹುಣಸೂರಿನಿಂದ ಕಳ್ಳಿಕೊಪ್ಪಲು ಕಡೆಗೆ ಹೋಗುತ್ತಿತ್ತು. ಈ ಸಂದರ್ಭದಲ್ಲಿಯೇ ಅಪಘಾತ ನಡೆದಿದ್ದು, ಬೈಕ್ ಸವಾರ ಸಾವನ್ನಪ್ಪಿದ್ದಾನೆ.