ಉಡುಪಿ: ಭೀಕರ ಅಪಘಾತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿಯಾಗಿರುವ ಘಟನೆ ನಡೆದಿದೆ.
ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಸ್ಥಳದಲ್ಲೇ ತಂದೆ ಸೇರಿದಂತೆ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ. ಈ ಘಟನೆ ಉಡುಪಿ (Udupi) ಜಿಲ್ಲೆ ಕಾರ್ಕಳದ (Karkala) ನಲ್ಲೂರಿನಲ್ಲಿ (Nallur) ನಡೆದಿದೆ.
ಸುರೇಶ್ ಆಚಾರ್ಯ (36), ಸುಮಿಕ್ಷಾ (7), ಸುಶ್ಮಿತಾ (5) ಹಾಗೂ ಸುಶಾಂತ್ (2) ಸಾವನ್ನಪ್ಪಿರುವ ದುರ್ದೈವಿಗಳು. ಘಟನೆಯಲ್ಲಿ ಪತ್ನಿ ಸುಶ್ಮಿತಾ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾಜೆಗುಡ್ಡೆ ಎಂಬ ಊರಿನ ಹತ್ತಿರ ಬೈಕ್ ನಲ್ಲಿ ಬರುತ್ತಿದ್ದಾಗ ಈ ಘಟನೆ ನಡೆದಿದೆ.
ಸಾವನ್ನಪ್ಪಿದವರನ್ನು ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು ಮೂಲದವರು ಎನ್ನಲಾಗಿದೆ. ವೇಣೂರಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಸಂದರ್ಭ ಘಟನೆ ನಡೆದಿದೆ. ಲಾರಿ ಚಾಲಕನ ಅಜಾಗರೂಕತೆ, ಅತೀ ವೇಗದಿಂದಾಗಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಈ ಕುರಿತು ಕಾರ್ಕಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








