ಹುಬ್ಬಳ್ಳಿ: ಬೆಂಗಳೂರು- ಮುಂಬಯಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಬಲಿಯಾಗಿರುವ ಘಟನೆ ನಡೆದಿದೆ.
ಧಾರವಾಡ (Dharwad) ಜಿಲ್ಲೆಯ ಕುಂದಗೋಳ (Kundagol) ತಾಲೂಕಿನ ಬೆಳ್ಳಿಗಟ್ಟಿ ಕ್ರಾಸ್ ಹತ್ತಿರ ಈ ಘಟನೆ ನಡೆದಿದೆ. ಶನಿವಾರ ಬೆಳ್ಳಂ ಬೆಳಿಗ್ಗೆ ಎರಡು ಕಾರು ಹಾಗೂ ಲಾರಿ ಮಧ್ಯೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ.








