ತುಮಕೂರು: ಕಂಬಳ (Kambala) ನೋಡಿ ಮರಳಿ ಹೋಗುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದ್ದು, ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೋರ್‌ವೆಲ್ ಲಾರಿ (Borewell Lorry) ಹಾಗೂ ಕಾರಿನ (Car) ನಡುವೆ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ. ಈ ಘಟನೆ ಜಿಲ್ಲೆಯ ಕುಣಿಗಲ್ (Kunigal) ತಾಲೂಕಿನ ಚಿಗಣಿಪಾಳ್ಯ ಹತ್ತಿರ ನಡೆದಿದೆ.
ಮಂಗಳೂರಿನ (Mangaluru) ಪೆರಾರ ಬಜಪ್ಪೆ ಗ್ರಾಮದ ನಿವಾಸಿ ಕಿಶನ್ ಶೆಟ್ಟಿ(20), ಭಟ್ಟರ ತೋಟ ಗ್ರಾಮದ ನಿವಾಸಿ ಫಿಲೀಪ್ ಲೋಬೋ (32) ಸಾವನ್ನಪ್ಪಿದ್ದಾರೆ. ನಿತೀಶ್ ಬಂಡಾರಿ, ಪ್ರೀತಿ ಲೋಬೋ ಹಾಗೂ ಹರೀಶ್ ಅಪಘಾತದಲ್ಲಿ ಗಾಯಗೊಂಡಿದ್ದರು. ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.