ಕೇಪ್‌ಟೌನ್ : ದಕ್ಷಿಣ ಆಫ್ರಿಕಾದ (South Africa) ಜೋಹಾನ್ಸ್‌ಬರ್ಗ್(Johannesburg) ಅಲ್ಲಿಯ 5 ಅಂತಸ್ತಿನ ಕಟ್ಟಡದಲ್ಲಿಯೇ ಭೀಕರ ಅಗ್ನಿ ಸಂಭವಿಸಿದ್ದು, 63 ಜನರು ಸಾವನ್ನಪ್ಪಿದ್ದಾರೆ.
ವಸತಿ ಕಟ್ಟಡದಲ್ಲಿ ಗುರುವಾರ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, 40ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇನ್ನೂ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಅಂದಾಜಿಸಲಾಗಿದೆ.
ಬೆಂಕಿಯನ್ನು ಬಹುಮಟ್ಟಿಗೆ ನಂದಿಸಲಾಗಿದೆ. ಶೋಧ ಹಾಗೂ ರಕ್ಷಣಾ ಕಾರ್ಯಾಚರಣೆ ಮುಂದುವರಿಯುತ್ತಿದೆ. ಈ ವಸತಿ ಕಟ್ಟಡದಲ್ಲಿ ಸುಮಾರು 200ಕ್ಕೂ ಅಧಿಕ ಜನರು ವಾಸಿಸುತ್ತಿದ್ದರು ಎನ್ನಲಾಗಿದೆ. ಬೆಂಕಿಗೆ ಸಾಕಷ್ಟು ಪ್ರಮಾಣದಲ್ಲಿ ಹಾನಿಯಾಗಿದೆ ಎನ್ನಲಾಗಿದೆ.