ನಡುರಸ್ತೆಯಲ್ಲಿ ವ್ಯಕ್ತಿಯನ್ನು ಕೊಚ್ಚಿ ಕೊಲೆ Bengaluru saaksha tv
ಬೆಂಗಳೂರು : ಜಮೀನು ವಿಚಾರವಾಗಿ ನಡು ರಸ್ತೆಯಲ್ಲೇ ವ್ಯಕ್ತಿಯನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಆವಲಹಳ್ಳಿ ಬಳಿಯ ಮಾಗೊರ್ಂಡನಹಳ್ಳಿಯಲ್ಲಿ ನಡೆದಿದೆ. ಕುಳ್ಳ ವೆಂಕಟೇಶ್ ಕೊಲೆಯಾದ ದುರ್ದೈವಿಯಾಗಿದ್ದಾರೆ.
ವೆಂಕಟೇಶ್ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಆಟೋದಲ್ಲಿ ಬಂದ ಐವರು ದುಷ್ಕರ್ಮಿಗಳು ಲಾಂಗು, ಮಚ್ಚಿನಿಂದ ಕೊಚ್ಚಿ ಕೊಲೆಗೈದಿದ್ದಾರೆ.
ಜಮೀನು ವಿಚಾರವಾಗಿ ಕುಳ್ಳ ವೆಂಕಟೇಶ್ ನ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಆವಲಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.