ADVERTISEMENT
Wednesday, May 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸ್ಥಳೀಯ ಕ್ರಿಕೆಟ್ ಟೂರ್ನಿಗೂ ಪಾಕಿಸ್ತಾನದಲ್ಲಿ ಉಗ್ರರ ಉಪದ್ರ…!

admin by admin
August 8, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಸ್ಥಳೀಯ ಕ್ರಿಕೆಟ್ ಟೂರ್ನಿಗೂ ಪಾಕಿಸ್ತಾನದಲ್ಲಿ ಉಗ್ರರ ಉಪದ್ರ…!

ಪಾಕಿಸ್ತಾನ ಸುರಕ್ಷಿತ ರಾಷ್ಟ್ರವಲ್ಲ ಎಂಬುದು ಮತ್ತೊಮ್ಮೆ ವಿಶ್ವಕ್ಕೆ ಸಾಬೀತಾಗಿದೆ. ಪಾಕ್ ನೆಲದಲ್ಲಿ ಬಾಂಬ್, ಬುಲೆಟ್ ಸಿಡಿಯುವುದು ಮಾಮೂಲಿಯಾಗಿಬಿಟ್ಟಿದೆ. ಉಗ್ರರ ಭೀತಿ ಬೇರೆ ದೇಶಗಳಿಗೆ ಮಾತ್ರವಲ್ಲ. ತನ್ನ ದೇಶದದ ಜನರು ಕೂಡ ಆತಂಕದಲ್ಲೇ ಬದುಕು ಸಾಗಿಸಬೇಕಾದಂತಹ ಪರಿಸ್ಥಿತಿ ಇದೆ.

Related posts

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

May 6, 2026
ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

May 6, 2026

ಇನ್ನು ಪಾಕಿಸ್ತಾನದಲ್ಲಿ ಸುಮಾರು ಒಂದು ದಶಕಗಳಿಂದ ಅಂತಾರಾಷ್ಟ್ರೀಯ ಕ್ರಿಕೆಟ್ ಟೂರ್ನಿಗಳು ನಡೆಯುತ್ತಿಲ್ಲ. 2009ರಲ್ಲಿ ಶ್ರೀಲಂಕಾ ಕ್ರಿಕೆಟಿಗರ ಮೇಲೆ ಗುಂಡಿನ ದಾಳಿ ನಡೆದ ನಂತರ ಪಾಕಿಸ್ತಾನಕ್ಕೆ ಯಾವುದೇ ಪ್ರಮುಖ ತಂಡಗಳು ಪ್ರವಾಸ ಮಾಡಿಲ್ಲ. ಕ್ರಿಕೆಟ್ ಆಟಗಾರರಿಗೆ ಪಾಕ್ ಸುರಕ್ಷಿತ ತಾಣವಲ್ಲ ಎಂದು ಯಾವುದೇ ಕ್ರಿಕೆಟ್ ಮಂಡಳಿಗಳು ತಮ್ಮ ತಂಡಗಳನ್ನು ಪಾಕ್ ಪ್ರವಾಸ ಮಾಡಲು ಒಪ್ಪಿಕೊಳ್ಳುತ್ತಿಲ್ಲ. ಹೇಗೋ ಸ್ವಲ್ಪ ಧೈರ್ಯ ಮಾಡಿರುವ ವೆಸ್ಟ್ ಇಂಡೀಸ್, ಜಿಂಬಾಬ್ವೆ ತಂಡಗಳು ಕೆಲವೊಂದು ಸರಣಿಗಳನ್ನು ಆಡಿವೆ. ಇನ್ನುಳಿದಂತೆ ಪಾಕ್ ತಟಸ್ಥ ತಾಣದಲ್ಲಿ ಸರಣಿಗಳನ್ನು ಆಯೋಜನೆ ಮಾಡುತ್ತಿದೆ. ಹೀಗಾಗಿ ಪಾಕ್ ಕ್ರಿಕೆಟ್ ಮಂಡಳಿ ಬೊಕ್ಕಸವೂ ಖಾಲಿಯಾಗಿದೆ.
ಈ ನಡುವೆ ಪಾಕ್ ಕ್ರಿಕೆಟ್ ತಂಡ ಈಗ ಇಂಗ್ಲೆಂಡ್ ಪ್ರವಾಸದಲ್ಲಿದೆ. ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯನ್ನು ಆಡುತ್ತಿದೆ. ಅದು ಕೂಡ ಒಪ್ಪಂದ ಮಾಡಿಕೊಂಡು ಈ ಸರಣಿಯನ್ನು ಆಡಲಾಗುತ್ತಿದೆ. ಇಂಗ್ಲೆಂಡ್‍ನಲ್ಲಿ ಪಾಕ್ ತಂಡ ಆಡಬೇಕಾದ್ರೆ ಇಂಗ್ಲೆಂಡ್ ಪಾಕ್ ಪ್ರವಾಸ ಕೈಗೊಳ್ಳಬೇಕು ಎಂಬುದರ ಬಗ್ಗೆ ಮಾತುಕತೆ ನಡೆದಿದ್ದವು. ಈ ಬಗ್ಗೆ ಪಿಸಿಬಿ ತನ್ನ ದೇಶದ ಮೇಲಿರುವ ಕಳಂಕವನ್ನು ತಪ್ಪಿಸುವ ಪ್ರಯತ್ನದಲ್ಲಿತ್ತು.
ಆದ್ರೆ ಈಗ ಪಾಕ್ ಕ್ರಿಕೆಟ್ ಗೆ ಮತ್ತೊಂದು ಆಘಾತ ಉಂಟಾಗಿದೆ. ಅಂತಾರಾಷ್ಟ್ರೀಯ, ದೇಶಿ ಕ್ರಿಕೆಟ್ ಬಿಡಿ, ಸ್ಥಳೀಯ ಕ್ರಿಕೆಟ್ ಟೂರ್ನಿಗೂ ರಕ್ಷಣೆ ಇಲ್ಲದಂತಾಗಿದೆ. ಲೋಕಲ್ ಟೂರ್ನಿಗಳಿಗೂ ಉಗ್ರರ ಕರಿನೆರಳು ಬಿದ್ದಿದೆ. ಹೌದು, ಪಾಕಿಸ್ತಾನದ ಕೈಬರ್ ಪಖ್ತು ನ್‍ಖ್ವಾ ಪ್ರಾಂತ್ಯದ ಕೋಹಟ್ ಡಿವಿಷನ್ ನಲ್ಲಿ ಕ್ರಿಕೆಟ್ ಟೂರ್ನಿ ನಡೆಯುತ್ತಿರುವ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಆದ್ರೆ ಈ ಗುಂಡಿನ ದಾಳಿಯಿಂದ ಯಾವುದೇ ಪ್ರಾಣ ಹಾನಿಯಾಗಿಲ್ಲ.

ಕೋವಿಡ್ ಸೋಂಕಿನ ನಡುವೆಯೂ ಪಾಕ್‍ನ ಓರ್ಕಝೆ ಜಿಲ್ಲೆಯ ಇಸ್ಮಾಯಲ್‍ಝೈ ತಾಲೂಕಿನ ದ್ರಾದರ್ ಮಮಝೈ ನಲ್ಲಿ ಅಮ್ನ್ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯ ನಡೆಯುತ್ತಿತ್ತು. ಈ ಪಂದ್ಯ ವೀಕ್ಷಣೆ ಮಾಡಲು ರಾಜಕೀಯ ನಾಯಕರು, ಪತ್ರಕರ್ತರು ಸೇರಿದಂತೆ ಸಾಕಷ್ಟು ಸಂಖ್ಯೆಯ ಕ್ರಿಕೆಟ್ ಅಭಿಮಾನಿಗಳು ಸೇರಿದ್ದರು. ಆದ್ರೆ ಮೈದಾನದ ಸಮೀಪದ ಬೆಟ್ಟದಿಂದ ಉಗ್ರರು ಏಕಾಏಕಿಯಾಗಿ ಗುಂಡಿನ ದಾಳಿ ನಡೆಸಿದ್ದರು. ಜನರು ಭಯದಿಂದ ಓಡಿ ಹೋಗಿದ್ದಾರೆ. ಆದ್ರೆ ಯಾವುದೇ ಜೀವಕ್ಕೆ ಹಾನಿಯಾಗಿಲ್ಲ ಎಂದು ಪಾಕ್‍ನ ಡೇಲಿ ಸ್ಟಾರ್ ವರದಿ ಮಾಡಿದೆ.
ಒಟ್ಟಿನಲ್ಲಿ ಪಾಕಿಸ್ತಾನ ತನ್ನ ಬುಡಕ್ಕೆ ತಾನೇ ಕೊಳ್ಳಿ ಇಟ್ಟುಕೊಂಡಿದೆ. ಉಗ್ರರನ್ನು ಪೋಷಣೆ ಮಾಡಿದ್ದ ಪಾಕ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪದೇ ಪದೇ ತಲೆತಗ್ಗಿಸುತ್ತಿದೆ.
ಈ ಎಲ್ಲಾ ಘಟನೆಗಳನ್ನು ನೋಡಿದಾಗ ಯಾವ ರಾಷ್ಟ್ರಗಳು ಪಾಕ್ ನೆಲದಲ್ಲಿ ಧೈರ್ಯವಾಗಿ ಕ್ರಿಕೆಟ್ ಆಡಲು ಬರುತ್ತವೆ. ಪಾಕ್ ಕ್ರಿಕೆಟ್ ಪಾಕಿಸ್ತಾನದ ರಾಜಕೀಯದಿಂದ ನಶಿಸಿಹೋಗುತ್ತಿದೆ. ಅದೆಷ್ಟೋ ಪ್ರತಿಭಾವನ್ವಿತ ಆಟಗಾರರ ಪ್ರತಿಭೆಗಳು ಕಮರಿ ಹೋಗುತ್ತವೆ. ಈ ಪಾಕಿಸ್ತಾನಕ್ಕೆ ಯಾವಾಗ ಬುದ್ದಿ ಬರುತ್ತೋ ಗೊತ್ತಿಲ್ಲ.

Tags: Amn Cricket tournamentbangladeshaEnglandICCOrakzai District in Kohat Divisionpak cricketpakistan cricketPCBsrilankaTerrorismwest indies
ShareTweetSendShare
Join us on:

Related Posts

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

ದೇಶದಲ್ಲಿ ಬಿಜೆಪಿಯ ಹೊಸ ಮೈಲಿಗಲ್ಲು!

by Shwetha
May 6, 2026
0

ದೇಶದ ರಾಜಕೀಯದಲ್ಲಿ ಭಾರತೀಯ ಜನತಾ ಪಾರ್ಟಿ (BJP) ಮತ್ತೊಂದು ಮಹತ್ವದ ಸಾಧನೆ ದಾಖಲಿಸಿದೆ. ಪ್ರಸ್ತುತ, ಬಿಜೆಪಿ ದೇಶಾದ್ಯಂತ 21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನೇರವಾಗಿ ಅಥವಾ...

ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

ನಮ್ಮ ಗೆಲುವನ್ನು ಕದಿಯಲಾಗಿದೆ.. ಮಮತಾ ಕಿಡಿ

by Shwetha
May 6, 2026
0

ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಹಿನ್ನೆಲೆ, ಮಮತಾ ಬ್ಯಾನರ್ಜಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಪಕ್ಷ ಟಿಎಂಸಿ ಯ ಸೋಲಿಗೆ ಚುನಾವಣಾ ಆಯೋಗವೇ ಕಾರಣ ಎಂದು ಅವರು...

ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಜೀವರಾಜ್ – ನನ್ನನ್ನು 3 ವರ್ಷ ವನವಾಸಕ್ಕೆ ಕಳಿಸಿದ್ರಿ, ಈಗ ಸವಾರಿ ಮಾಡ್ತೀರಾ?

ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ ಜೀವರಾಜ್ – ನನ್ನನ್ನು 3 ವರ್ಷ ವನವಾಸಕ್ಕೆ ಕಳಿಸಿದ್ರಿ, ಈಗ ಸವಾರಿ ಮಾಡ್ತೀರಾ?

by Shwetha
May 6, 2026
0

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಪ್ರಕ್ರಿಯೆಯು ರಾಜ್ಯ ರಾಜಕಾರಣದಲ್ಲಿ ಈಗ ಹೊಸ ಕಿಚ್ಚು ಹಚ್ಚಿದೆ. ಮರುಎಣಿಕೆಯಲ್ಲಿ ಜೀವರಾಜ್ ಅಕ್ರಮ ಎಸಗಿದ್ದಾರೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ...

ತಮಿಳುನಾಡು ರಾಜಕೀಯದಲ್ಲಿ ವಿಜಯ್ ಭರವಸೆಗಳ ಅಬ್ಬರ: ಈಡೇರಿಸಲು ಬೇಕು ಬರೋಬ್ಬರಿ 42 ಸಾವಿರ ಕೋಟಿ ರೂಪಾಯಿಗಳ ಬೃಹತ್ ಮೊತ್ತ

ತಮಿಳುನಾಡು ರಾಜಕೀಯದಲ್ಲಿ ವಿಜಯ್ ಭರವಸೆಗಳ ಅಬ್ಬರ: ಈಡೇರಿಸಲು ಬೇಕು ಬರೋಬ್ಬರಿ 42 ಸಾವಿರ ಕೋಟಿ ರೂಪಾಯಿಗಳ ಬೃಹತ್ ಮೊತ್ತ

by Shwetha
May 6, 2026
0

ತಮಿಳುನಾಡಿನ ಜನಪ್ರಿಯ ನಟ ಮತ್ತು ತಮಿಳಗ ವೆಟ್ರಿ ಕಳಗಂ ಪಕ್ಷದ ನಾಯಕ ವಿಜಯ್ ಅವರು ಘೋಷಿಸಿರುವ ಜನಪ್ರಿಯ ಕಲ್ಯಾಣ ಯೋಜನೆಗಳು ಚುನಾವಣಾ ಕಣದಲ್ಲಿ ಸಂಚಲನ ಮೂಡಿಸಿರುವುದು ನಿಜ....

ಅಮೆರಿಕದ ವಿಮಾನ ಮಿಸ್ಸಿಂಗ್!

ಅಮೆರಿಕದ ವಿಮಾನ ಮಿಸ್ಸಿಂಗ್!

by Shwetha
May 6, 2026
0

ಅಮೆರಿಕದ ಭಾರೀ ಸೈನಿಕ ವಿಮಾನವಾದ KC-135 ಸ್ಟ್ರಾಟೋಟ್ಯಾಂಕರ್ ಪರ್ಷಿಯನ್ ಗಲ್ಫ್ ಪ್ರದೇಶದಲ್ಲಿ ಕಾಣೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಈ ವಿಮಾನವು ಗಾಳಿಯಲ್ಲೇ ಇಂಧನ ತುಂಬುವ ಪ್ರಮುಖ ಕಾರ್ಯವನ್ನು ನಿರ್ವಹಿಸುವುದರಿಂದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram