ಜಮ್ಮು Jammu ಕಾಶ್ಮೀರದಲ್ಲಿ ಉಗ್ರರ ದಾಳಿ : ಇಬ್ಬರು ಯೋಧರು ಹುತಾತ್ಮ
ಜಮ್ಮು ಕಾಶ್ಮೀರ : ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರಿದಿದ್ದು, ಸಿಆರ್ ಪಿಎಫ್ ಯೋಧರ ಮೇಲೆ ದಾಳಿ ನಡೆಸಿದ್ದಾರೆ.
ದಾಳಿಯಲ್ಲಿ ಇಬ್ಬರು ಸಿಆರ್ ಪಿಎಫ್ ಯೋಧರು ಮೃತಪಟ್ಟಿದ್ದಾರೆ.
ಶ್ರೀನಗರ ಹೊರವಲಯದಲ್ಲಿರುವ ಲಾವಪೊರಾ ಪ್ರದೇಶದಲ್ಲಿ ಸಿಆರ್ಪಿಎಫ್ ಯೋಧರ ಮೇಲೆ ದಾಳಿ ನಡೆದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷೆ ಮಾಡಲಾಗಿದೆ.