ಉಗ್ರರ ಗುಂಡಿನ ದಾಳಿ : ಇಬ್ಬರು ಪೊಲೀಸರು ಹುತಾತ್ಮ Jammu and Kashmir
ಬಾರಾಮುಲ್ಲಾ : ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ಪಟ್ಟಣದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ.
ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಪೊಲೀಸರು ಹುತಾತ್ಮರಾಗಿದ್ದು, ಮೂವರು ನಾಗರಿಕರು ಮೃತಪಟ್ಟಿದ್ದಾರೆ.
ಉಗ್ರರ ಈ ದಾಳಿಯನ್ನು ಇನ್ನೂ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.
ಸೋಪೋರ್ ನಲ್ಲಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಉಗ್ರನೊಬ್ಬ ಗಸ್ತು ತಿರುಗುತ್ತಿದ್ದ ಪೊಲೀಸರ ಗುಂಪಿನ ಮೇಲೆ ಗುಂಡು ಹಾರಿಸಿದ್ದು, ಆ ಬಳಿಕ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ಆರಂಭವಾಗಿದೆ.
ದಾಳಿ ನಡೆಸಿದವರು ಲಷ್ಕರ್-ಇ-ತೈಬಾ ಸಂಘಟನೆಯ ಉಗ್ರರು ಎಂದು ಕಾಶ್ಮೀರ ಐಜಿ ವಿಜಯ್ ಕುಮಾರ್ ತಿಳಿಸಿದ್ದಾರೆ.