ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ರಿಯಾಸಿಯಲ್ಲಿ (Reasi) ಯಾತ್ರಾರ್ಥಿಗಳಿದ್ದ ಬಸ್ ಮೇಲೆ ಭಯೋತ್ಪಾದಕರ ದಾಳಿಯ ಹೊಣೆಯನ್ನು ಪಾಕಿಸ್ತಾನ ಬೆಂಬಲಿತ ಉಗ್ರ ಸಂಘಟನೆ ದಿ ರೆಸಿಸ್ಟೆನ್ಸ್ ಫ್ರಂಟ್ (TRF) ಹೊತ್ತುಕೊಂಡಿದೆ.
ಉಗ್ರ ಸಂಘಟನೆ ದಾಳಿ ಕುರಿತು ಅದು ಸಂದೇಶ ರವಾನಿಸಿದೆ. ಇದು ಕೇವಲ ಆರಂಭ, ಪ್ರವಾಸಿಗರು ಮತ್ತು ಸ್ಥಳೀಯರಲ್ಲದವರ ಮೇಲೆ ಹೆಚ್ಚಿನ ದಾಳಿ ನಡೆಸಲಾಗುವುದು ಎಂಬ ಎಚ್ಚರಿಕೆ ನೀಡಿದೆ. ಈ ಘಟನೆಯಲ್ಲಿ 10 ಜನ ಯಾತ್ರಾರ್ಥಿಗಳು ಸಾವನ್ನಪ್ಪಿದ್ದರು. ಭಯೋತ್ಪಾದಕರ ಪತ್ತೆಗೆ ಭಾರತೀಯ ಸೇನೆ ವ್ಯಾಪಕ ಶೋಧ ಕಾರ್ಯಾಚರಣೆ ಆರಂಭಿಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ, ಇದಕ್ಕೆ ಉಗ್ರರು ಭಾರೀ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಭಾನುವಾರ (ಜೂ.9) ಮಾತಾ ವೈಷ್ಣೋ ದೇವಿ (Vaishno Devi Temple) ದೇಗುಲದ ಕತ್ರಾ ಮಾರ್ಗವಾಗಿ ಶಿವ ಖೋರಿ ದೇಗುಲದಿಂದ ಯಾತ್ರಾರ್ಥಿಗಳು ಬಸ್ ನಲ್ಲಿ ಹಿಂತಿರುಗುತ್ತಿದ್ದ ಸಂದರ್ಭದಲ್ಲಿ ಉಗ್ರರು ದಾಳಿ ನಡೆಸಿದ್ದರು.