ಜಮ್ಮು ಮತ್ತು ಕಾಶ್ಮೀರದ ನೌಗಂನಲ್ಲಿ ಪೊಲೀಸರ ಮೇಲೆ ಉಗ್ರರ ದಾಳಿ
ಶ್ರೀನಗರ, ಅಗಸ್ಟ್ 14: ಜಮ್ಮು ಮತ್ತು ಕಾಶ್ಮೀರದ ನೌಗಂನಲ್ಲಿ ಪೊಲೀಸರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಶುಕ್ರವಾರ ಭಯೋತ್ಪಾದಕರು ಪೊಲೀಸ್ ತಂಡದ ಮೇಲೆ ಗುಂಡು ಹಾರಿಸಿದ್ದು, ಇಬ್ಬರು ಪೊಲೀಸ್ ಸಿಬ್ಬಂದಿಗಳು ಹುತಾತ್ಮರಾಗಿದ್ದಾರೆ. ಈ ಘಟನೆ ಕೇಂದ್ರಾಡಳಿತ ಪ್ರದೇಶದ ಶ್ರೀನಗರದ ಹೊರವಲಯದಲ್ಲಿರುವ ನೌಗಮ್ ನಿಂದ ವರದಿಯಾಗಿದೆ.

ಮೂಲಗಳ ಪ್ರಕಾರ, ದಾಳಿಯಲ್ಲಿ ಒಟ್ಟು ಮೂವರು ಪೊಲೀಸರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ ಮತ್ತು ಪ್ರದೇಶವನ್ನು ಸುತ್ತುವರಿಯಲಾಗಿದೆ. ದಾಳಿಕೋರರನ್ನು ಬಂಧಿಸಲು ಕಾರ್ಯಾಚರಣೆ ಮುಂದುವರಿದಿದೆ ಎಂದು ಸುದ್ದಿ ಮೂಲಗಳು ತಿಳಿಸಿವೆ.








