ಶ್ರೀನಗರ: ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದ (Jammu And Kashmir) ಹಳ್ಳಿಯೊಂದರಲ್ಲಿ ನಡೆದಿದ್ದ ಭಯೋತ್ಪಾದಕರ ದಾಳಿಯಲ್ಲಿ ಪಾಕ್ ಕೈವಾಡವಿದೆ ಎಂದು ಶಂಕಿಸಲಾಗಿದೆ.
ಇಬ್ಬರು ಭಯೋತ್ಪಾದಕರಲ್ಲಿ ಓರ್ವ ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆಯ ಕಮಾಂಡರ್ ಎಂದು ಮೂಲಗಳಿಂದ ತಿಳಿದು ಬಂದಿದೆ. ಹತ್ಯೆಯಾದ ಇಬ್ಬರಲ್ಲಿ ಓರ್ವ ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆಯ ಕಮಾಂಡರ್ ರಿಹಾನ್ ಎಂದು ಗುರುತಿಸಲಾಗಿದೆ.
ಹತ್ಯೆಗೀಡಾದ ರಿಹಾನ್, ಉಪಗ್ರಹ ಸಂವಹನ ಸಾಧನ (ಸ್ಯಾಟಲೈಟ್ ಫೋನ್) ಹಾಗೂ ಅತ್ಯಾಧುನಿಕ M4 ರೈಫಲ್ ಹೊತ್ತೊಯ್ಯುತ್ತಿದ್ದ. ಪಾಕ್ ಸೇನೆ, ನೌಕಾಪಡೆ ಹಾಗೂ ವಾಯುಸೇನೆಗಾಗಿ ಈ ಮೈಕ್ರೋ ಸ್ಯಾಟಲೈಟ್ ಫೋನ್ ಖರೀದಿಸಲಾಗಿತ್ತು ಎಂಬುವುದು ದೃಢಪಟ್ಟಿದೆ.
ಈ ಹತ್ಯೆ ನಡೆಯುವುದಕ್ಕೂ ಮುನ್ನ ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಸಂದರ್ಭದಲ್ಲಿ ಭಯೋತ್ಪಾದಕ ದಾಳಿ ನಡೆದಿತ್ತು. ಬಸ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ ಪರಿಣಾಮ ಬಸ್ ನಲ್ಲಿದ್ದ 9 ಜನ ಸಾವನ್ನಪ್ಪಿದ್ದರು. 4 ಭಯೋತ್ಪಾದಕರಿಂದ ದಾಳಿ ನಡೆದಿತ್ತು. ಈ ಸಂದರ್ಭದಲ್ಲಿ ಉಗ್ರರು ಮತ್ತು ಸೇನೆ ನಡುವಿನ ಗುಂಡಿನ ಚಕಮಕಿಯಲ್ಲಿ ಸಿಆರ್ಪಿಎಫ್ ಯೋಧ ಮತ್ತು ಇಬ್ಬರು ಭಯೋತ್ಪಾದಕರು ಸೇರಿದಂತೆ 11 ಜನ ಸಾವನ್ನಪ್ಪಿದ್ದರು.
ಸದ್ಯ ತನಿಖೆಯಲ್ಲಿ ಪಾಕ್ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ದಾಳಿಯ ಜೈಶ್ ಎ ಮೊಹಮ್ಮದ್ ಮತ್ತು ಹಿಜ್ಬ್-ಉಲ್ ಮುಜಾಹಿದ್ದೀನ್ ಭಯೋತ್ಪಾದಕ ಸಂಘಟನೆಗಳು ಪಾಕಿಸ್ತಾನದ ರಾವಲಕೋಟ್ನಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ್ದವು. ಈ ವೇಳೆ ಭಾರತದ ಮೇಲಿನ ದಾಳಿಗೆ ಯೋಜಿಸಿದ್ದವು ಎನ್ನಲಾಗಿದೆ.