ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಮತ್ತೆ ಭಯೋತ್ಪಾದಕರು ಅಟ್ಟಹಾಸ ಮೆರೆದಿದ್ದಾರೆ.
ಭಾನುವಾರ ಸಂಜೆ ಜಮ್ಮು ಮತ್ತು ಕಾಶ್ಮೀರದ ಗಂದರ್ಬಾಲ್ (Ganderbal) ಜಿಲ್ಲೆಯ ಸೋನಾಮಾರ್ಗ್ ಪ್ರದೇಶದಲ್ಲಿ ಇಬ್ಬರು ವಲಸೆ ಕಾರ್ಮಿಕರನ್ನು (Migrant Workers) ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ನಿರ್ಮಾಣ ಹಂತದಲ್ಲಿನ ಸುರಂಗದ ಬಳಿ ದಾಳಿ ನಡೆದಿದೆ ಎಂದು ಅಧಿಕಾರಿಗಳು ಹೇಳಿರುವುದಾಗಿ ವರದಿಯಾಗಿದೆ. ಗುಂಡಿನ ದಾಳಿ ನಡೆದ ಸ್ಥಳಕ್ಕೆ ಭದ್ರತಾ ಪಡೆಗಳು ತಲುಪಿದ್ದು, ಪ್ರದೇಶವನ್ನು ಸುತ್ತುವರಿದಿವೆ. ಭಯೋತ್ಪಾದಕರಿಗಾಗಿ ಹುಡುಕಾಟ ನಡೆಸಿವೆ.
ದಾಳಿಗೊಳಗಾದ ಕಾರ್ಮಿಕರು ಝಡ್ ಮೋರ್ಹ್ ಸುರಂಗದಲ್ಲಿ ಕೆಲಸ ಮಾಡುವ ತಂಡದ ಭಾಗವಾಗಿದ್ದರು ಎನ್ನಲಾಗಿದೆ.