ಜಮ್ಮು-ಕಾಶ್ಮೀರ : ಸಿಆರ್‍ಪಿಎಫ್ ತಂಡದ ಮೇಲೆ ಉಗ್ರರ ದಾಳಿ
ಶ್ರೀನಗರ : ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಸಿಆರ್‍ಪಿಎಫ್ ತಂಡದ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ.
ಇಂದು ಬೆಳಿಗ್ಗೆ ಏಕಾಏಕಿ ಸಿಆರ್ ಪಿಎಫ್ ತಂಡದ ಮೇಲೆ ದಾಳಿ ನಡಸಿದ್ದು, ಘಟನೆಯಲ್ಲಿ ಒಬ್ಬರು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭದ್ರತಾ ಸಿಬ್ಬಂದಿ ಕ್ರಾಲ್‍ಚೆಕ್ ಪ್ರದೇಶದಲ್ಲಿ ರಸ್ತೆ ತೆರವು ಕಾರ್ಯ ನಡೆಸುತ್ತಿದ್ದಾಗ ಉಗ್ರರು ದಾಳಿ ನಡೆಸಿದ್ದಾರೆ. ಈ ವೇಳೆ ಸಿಬ್ಬಂದಿ ಅಜಯ್ ಕುಮಾರ್ ಗಾಯಗೊಂಡಿದ್ದಾರೆ.
ಸದ್ಯ ಸ್ಥಳದಲ್ಲಿ ಬಿಗುವಿನ ವಾತಾರವಣೆ ನಿರ್ಮಾಣವಾಗಿದ್ದು, ಘಟನಾ ಸ್ಥಳವನ್ನು ಭದ್ರತಾ ಪಡೆಗಳು ಸುತ್ತುವರಿದು ಉಗ್ರರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿವೆ.









