ಕಣಿವೆನಾಡು ಕಾಶ್ಮೀರದಲ್ಲಿ ‘ಉಗ್ರ’ ಸಂಹಾರ….! ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಮಟಾಶ್..!
ಜಮ್ಮು ಕಾಶ್ಮೀರದ ಬಂಡಿಪೊರಾ ಜಿಲ್ಲೆಯಲ್ಲಿ ಭದ್ರತಾ ಪಡೆ ನಡೆಸಿದ ಎನ್ ಕೌಂಟರ್ ನಲ್ಲಿ ಇಂದು ಮತ್ತಿಬ್ಬರು ಉಗ್ರರು ಹತರಾಗಿದ್ದಾರೆ. ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಬಂಡಿಪೊರಾದ ಶೋಕ್ಬಾಬಾ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿರುವ ಮಾಹಿತಿ ಮೇರೆಗೆ ಭದ್ರತಾ ಪಡೆಯು ಶೋಧ ನಡೆಸಿದೆ. ಈ ವೇಳೆ ಉಗ್ರರು ಮೊದಲು ದಾಳಿ ನಡೆಸಿದ್ದಾರೆ.
ಇದಕ್ಕೆ ಭದ್ರತಾ ಪಡೆಯು ಪ್ರತಿದಾಳಿ ನಡೆಸಿದ್ದು, ಈ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಮೃತಪಟ್ಟಿದ್ಧಾರೆ ಎಂದು ವರದಿಯಾಗಿದೆ. ಮೃತ ಉಗ್ರರ ಗುರುತನ್ನು ಪತ್ತೆ ಹಚ್ಚಲಾಗುತ್ತಿದೆ. ಇನ್ನುಳಿದ ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿದುಬಂದಿದೆ. ಅರಣ್ಯ ಪ್ರದೇಶದಲ್ಲಿ ಎಷ್ಟು ಮಂದಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಲಭ್ಯವಾಗಿಲ್ಲ. ಆದರೆ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ದಾಳಿ ಮುಂದುವರಿದಿದ್ದು, ಉಗ್ರರ ಸಾವಿನ ಪ್ರಮಾಣ ಹೆಚ್ಚಳವಾಗುವ ಸಾಧ್ಯತೆ ಇರುವುದಾಗಿ ವರದಿಯಾಗಿದೆ.








