ನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ನಡೆದಿದ್ದು, ವಲಸೆ ಕಾರ್ಮಿಕರೊಬ್ಬರು ಗುಂಡಿಗೆ ಬಲಿಯಾಗಿದ್ದಾರೆ.
ಅನಂತನಾಗ್ ಜಿಲ್ಲೆಯಲ್ಲಿ ಉಗ್ರರು ಕಾರ್ಮಿಕರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ರಾಜು ಷಾ ಎಂಬ ಕಾರ್ಮಿಕನೇ ಹತ್ಯೆಯಾದವರು. ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೊಲೀಸರು ಮಾಹಿತಿ ನೀಡಿದ್ದಾರೆ. ಭಯೋತ್ಪಾದಕರ ಗುಂಡೇಟಿನಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಆ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಬುಧವಾರ ಬೆಳಗ್ಗೆ ಇಬ್ಬರು ಶಂಕಿತ ಭಯೋತ್ಪಾದಕರನ್ನು ಬಿಜ್‌ಬೆಹರಾದಿಂದ ಬಂಧಿಸಿ, ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಸೋಮವಾರ ಕೂಡ ಡೆಹ್ರಾಡೂನ್ ನಿವಾಸಿಯೊಬ್ಬರು ಉಗ್ರರ ಗುಂಡಿಗೆ ಬಲಿಯಾಗಿದ್ದಾರೆ. ಒಂದು ವಾರದಲ್ಲಿಯೇ ಮತ್ತೊಂದು ದಾಳಿ ನಡೆದಿದೆ. ಭಯೋತ್ಪಾದಕರು ಪಾಕಿಸ್ತಾನ ಸಂಪರ್ಕ ಹೊಂದಿರುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.