ಥಾಯ್ಲೆಂಡ್ ನಲ್ಲಿ ಮಿತಿ ಮೀರಿದ ಕೊರೊನಾ ಹಾವಳಿ – ಕಠಿಣ ರೂಲ್ಸ್ ಜಾರಿ , ನಿಯಮ ಉಲ್ಲಂಘಿಸಿದ್ರೆ 91,393 ರೂ. ದಂಡ..!
ಥಾಯ್ಲೆಂಡ್ : ಥಾಯ್ಲೆಂಡ್ ನಲ್ಲಿ ಕೋವಿಡ್ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಹೋಗುತ್ತಿದ್ದು, ಆತಂಕ ಸೃಷ್ಟಿಸಿದೆ.. ಕೋವಿಡ್ ದೈನಂದಿನ ಪ್ರಕರಣಗಳ ಸಂಖ್ಯೆ 10,000 ದಾಟಿದ ಹಿನ್ನೆಲೆಯಲ್ಲಿ ಕೋವಿಡ್ ನಿಯಮಗಳನ್ನು ಇನ್ನಷ್ಟು ಕಠಿಣಗೊಳಿಸಲಾಗಿದೆ ಅಲ್ಲಿನ ಸರ್ಕಾರ.
ಥಾಯ್ಲೆಂಡ್ ನಲ್ಲಿ ಶನಿವಾರ 141 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ದೇಶದಲ್ಲಿ ಸೋಂಕು ಉಲ್ಬಣಗೊಳ್ಳುತ್ತಿರುವುದರಿಂದ, ಪ್ರಕರಣಗಳು ಹೆಚ್ಚಿರುವ ಬ್ಯಾಂಕಾಕ್ ನಗರ ಸೇರಿದಂತೆ ಇತರೆ ಹಲವಾರು ಪ್ರಾಂತ್ಯಗಳಲ್ಲಿ ರಾತ್ರಿ ಕರ್ಫ್ಯೂ ಸೇರಿ ಹಲವು ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗಿದೆ.
ಏಪ್ರಿಲ್ ನಿಂದ ಇಲ್ಲಿ ಪ್ರಕರಣಗಳು ಏರಿಕೆಯಾಗ್ತಲೇ ಇವೆ. ಆಸ್ಪತ್ರೆಗಳಲ್ಲಿ ಬೆಡ್ ಕೊರತೆಯ ವಾತಾವರಣ ಸೃಷ್ಟಿಯಾಗಗ್ತಿದ್ದು, ಲಸಿಕೆ ಪೂರೈಕೆಯಲ್ಲಿ ಉಂಟಾದ ಕೊರತೆಯಿಂದಾಗಿ ಲಸಿಕೆ ಅಭಿಯಾನವು ನಿಧಾನಗತಿಯಲ್ಲಿ ನಡೆಯುತ್ತಿದೆ. ಈವರೆಗೆ ಒಟ್ಟು ಜನಸಂಖ್ಯೆಯ ಶೇಕಡ 5 ಜನರು ಮಾತ್ರ ಪೂರ್ಣ ಪ್ರಮಾಣದ ಲಸಿಕೆ ಪಡೆದಿದ್ದಾರೆ.
ಶೇ 15ರಷ್ಟು ಜನರು ಭಾಗಶಃ ಲಸಿಕೆ ಪಡೆದಿದ್ದಾರೆ. ಈ ನಡುವೆ ಥಾಯ್ಲೆಂಡ್ ಸರ್ಕಾರವು ಅನೇಕ ಕಟ್ಟುನಿಟ್ಟಿನ ಕ್ರಮಗಳನ್ನ ತೆಗೆದುಕೊಂಡಿದ್ದು, ರಾತ್ರಿ ಸಭೆ, ಸಮಾರಂಭ, ಜಾಥಾಗಳ ಮೇಲೆ ನಿರ್ಬಂಧ ಸೇರಿದಂತೆ ಹೆಚ್ಚುವರಿ ನಿಯಮಗಳನ್ನು ಶುಕ್ರವಾರ ಜಾರಿಗೆ ತಂದಿದೆ.
ಈ ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ 91,393 ರೂ. ದಂಡ ವಿಧಿಸಲಾಗುವುದು ಎಂದು ಸರ್ಕಾರ ಹೇಳಿದೆ. ಇನ್ನೂ ದೇಶದಲ್ಲಿ ಲಸಿಕೆಯ ಕೊರತೆ ಎದುರಾಗಿರುವುದರಂದಿ ಬಹಳ ಕಡಿಮೆ ಜನರು ಲಸಿಕೆ ಪಡೆದಿದ್ದಾರೆ. ಹಾಗಾಗಿ ದೇಶದಲ್ಲಿ ಉತ್ಪಾದಿಸಲಾಗುತ್ತಿರುವ ಆಸ್ಟ್ರಾಜೆನೆಕಾ ಲಸಿಕೆಯ ರಫ್ತನ್ನು ಕಡಿಮೆಗೊಳಿಸಬೇಕು ಎಂದು ಥಾಯ್ಲೆಂಡ್ ನ ಆರೋಗ್ಯ ಅಧಿಕಾರಿಗಳು ಒತ್ತಾಯಿಸಿದ್ದಾರೆ. ಅಂದ್ಹಾಗೆ ಥಾಯ್ಲೆಂಡ್ ನಲ್ಲಿ ಸಾಂಕ್ರಾಮಿಕದ ಆರಂಭದಿಂದ ಈವರೆಗೆ 391,989 ಪ್ರಕರಣಗಳು ವರದಿಯಾಗಿವೆ. 3,240 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್ , ಕ್ವಾರಂಟೈನ್ ನಿಂದಾಗಿ ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ… ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.