ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳ ಸರ್ಕಾರ ಕಾಸರಗೋಡಿನ ತಲಪಾಡಿ ಚೆಕ್ ಪೋಸ್ಟ್ ಬಂದ್ ಬಂದಿದೆ.
ಉದ್ಯೋಗ ನಿಮಿತ್ತ ಕಾಸರಗೋಡು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ನಡುವೆ ತಲಪಾಡಿ ಚೆಕ್ ಪೋಸ್ಟ್ ಮೂಲಕವೇ ನಿತ್ಯವೂ ಸಾವಿರಾರು ಜನರು ಸಂಚರಿಸುತ್ತಿದ್ದರು. ಆದರೆ, ಇಂದು ತಲಪಾಡಿ ಚೆಕ್ ಪೋಸ್ಟ್ ಬಂದ್ ಮಾಡಿದ್ದರಿಂದ ನೂರಾರು ಜನರು ಪರದಾಟ ನಡೆಸುತ್ತಿದ್ದಾರೆ.

ಲಾಕ್‌ಡೌನ್ ನಂತರ ಉದ್ಯೋಗ, ಶಿಕ್ಷಣದ ಕಾರಣಕ್ಕೆ ನಿತ್ಯವೂ ಎರಡೂ ಜಿಲ್ಲೆಗಳ ನಡುವೆ ಸಂಚರಿಸುವವರಿಗೆ ಕೇರಳದ ಕಾಸರಗೋಡು ಹಾಗೂ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲಾಡಳಿತಗಳು ಪಾಸ್ ನೀಡಿದ್ದವು. ಆದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಕಾರಣದಿಂದ ಕಾಸರಗೋಡು ಜಿಲ್ಲಾಡಳಿತ ಮಂಗಳವಾರದಿAದ ಪ್ರಯಾಣ ನಿರ್ಬಂಧಿಸಿದೆ.
ತಿAಗಳಲ್ಲಿ ಒಮ್ಮೆ ಮಾತ್ರ ಒಂದು ಕಡೆಗೆ ಪ್ರಯಾಣಿಸಬೇಕು ಮತ್ತು ಕನಿಷ್ಠ ೨೮ ದಿನಗಳ ಕಾಲ ಅಲ್ಲಿಯೇ ಇರಬೇಕು ಎಂಬ ಷರತ್ತನ್ನು ಕಾಸರಗೋಡು ಜಿಲ್ಲಾಡಳಿತ ವಿಧಿಸಿದೆ. ಈ ಹಿಂದೆ ನೀಡಿದ್ದ ಪಾಸ್ ಹಿಡಿದು ಮಂಗಳವಾರ ಬೆಳಿಗ್ಗೆ ತಲಪಾಡಿ ಚೆಕ್ ಬಳಿ ಬಂದ ನೂರಕ್ಕೂ ಹೆಚ್ಚು ಮಂದಿಯನ್ನು ಕಾಸರಗೋಡು ಪೊಲೀಸರು ತಡೆದು ನಿಲ್ಲಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಪೊಲೀಸರು ಮತ್ತು ಜನರ ನಡುವೆ ವಾಗ್ವಾದ ನಡೆಯುತ್ತಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ ಆಗಿದೆ. ಹೆಚ್ಚುವರಿ ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ.







