ಸಿಎಂ ಬದಲಾವಣೆ ಚರ್ಚೆ ಬೆನ್ನಲ್ಲೇ ದೆಹಲಿಯತ್ತ ರಾಜ್ಯಪಾಲರು
ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕೂಗು ತೀವ್ರ ಸ್ವರೂಪ ಪಡೆದುಕೊಳ್ಳಿರುವ ಬೆನ್ನಲ್ಲೆ ರಾಜ್ಯದ ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿರುವ ಥಾವರ್ ಚಂದ್ ಗೆಹ್ಲೋಟ್ ದಿಢೀರ್ ನವದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಮುಖ್ಯಮಂತ್ರಿ ಬದಲಾಗುತ್ತಾರೆ ಅನ್ನೋ ಚರ್ಚೆ, ಕಟೀಲ್ ಆಡಿಯೋ ವೈರಲ್ ನಂತಹ ರಾಜಕೀಯ ವಿದ್ಯಮಾನಗಳು ರಾಜ್ಯದಲ್ಲಿ ನಡೆಯುತ್ತಿರುವಾಗಲೇ ರಾಜ್ಯಪಾಲರು ದೆಹಲಿಯತ್ತ ಹೊರಟಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಮೂಲಗಳ ಪ್ರಕಾರ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದ್ರೆ, ಅದರ ಅಂಗೀಕಾರ ಕುರಿತು ಮಾಹಿತಿ ಪಡೆದುಕೊಳ್ಳಲು ರಾಜ್ಯಪಾಲರು ದೆಹಲಿಗೆ ಹೋಗಿರಬಹುದು ಎಂದು ಹೇಳಲಾಗುತ್ತಿದೆ.
ರಾಜ್ಯಪಾಲರ ದೆಹಲಿ ಭೇಟಿ ಸದ್ಯದ ರಾಜಕೀಯ ಬೆಳವಣಿಗೆ ಗಮನಿಸಿದ್ರೆ ಜುಲೈ 26ಕ್ಕೆ ಬಿ.ಎಸ್.ಯಡಿಯೂರಪ್ಪ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರಕ್ಕೆ ಮತ್ತಷ್ಟು ಪುಷ್ಠಿ ಸಿಗುತ್ತಿದೆ.