ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣವಚನ Thawarchand Gehlot
ಬೆಂಗಳೂರು : ಕರ್ನಾಟಕ ರಾಜ್ಯದ ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ.
ರಾಜಭವನದ ಗಾಜಿನ ಮನೆಯಲ್ಲಿ ಪದಗ್ರಹಣ ಕಾರ್ಯಕ್ರಮ ನಡೆದಿದ್ದು, ಕರ್ನಾಟಕದ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ ಓಕಾ ಅವರು ನೂತನ ರಾಜ್ಯಪಾಲರಿಗೆ ಪ್ರಮಾಣ ವಚನ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.
ಇತ್ತೀಚೆಗೆ ಕರ್ನಾಟಕ ಸೇರಿದಂತೆ 8 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕಮಾಡಿ ರಾಷ್ಟ್ರಪತಿಗಳು ಆದೇಶಿಸಿದ್ದರು.
ಈ ವೇಳೆ ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಅವರನ್ನು ನೇಮಕ ಮಾಡಲಾಗಿತ್ತು.
ಅದರಂತೆ ಇಂದು ಕರ್ನಾಟಕದ 19 ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.