ಸದ್ಯದಲ್ಲೇ 3ನೇ ಮುಖ್ಯಮಂತ್ರಿ , ಸರಣಿ ಟ್ವೀಟ್ ಮಾಡಿ ಬಿಜೆಪಿಯನ್ನ ಛೇಡಿಸಿದ ಕಾಂಗ್ರೆಸ್
ರಾಜ್ಯದಲ್ಲಿ ಸದ್ಯದಲ್ಲೇ ಮೂರನೇ ಮುಖ್ಯಮಂತ್ರಿ ನೇಮಕವಾಗಲಿದೆ. ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿ ಗಾದಿಯಿಂದ ಕೆಳಗಿಳಿಯಲು ಕೊನೆಯ ದಿನಗಳನ್ನ ಎಣಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಸರಣಿ ಟ್ವೀಟ್ ಮಾಡಿ ಕರ್ನಾಟಕ ಕಾಂಗ್ರೆಸ್ ಬಿಜೆಪಿಯನ್ನ ಛೇಡಿಸಿದೆ.
ಮೊದಲ ಸಿಎಂ – 2,500 ಕೋಟಿ ರೂ
ಎರಡನೇ ಸಿಎಂ – 2,500 ಕೋಟಿ ರೂ
ಮೂರನೇ ಸಿಎಂ – 2,500 ಕೋಟಿ ರೂ
ಒಟ್ಟು ಸಂಪಾದನೆ – 7,500 ಕೋಟಿ ರೂ
BJP4Karnataka ಪಕ್ಷದ ಹೈಕಮಾಂಡ್ ಸಂಪಾದನೆಗೆ ಅದ್ಬುತ ದಾರಿ ಕಂಡುಕೊಂಡಿದೆ! ಬೊಮ್ಮಾಯಿ ಅವರೇ, ನಿಮ್ಮ ಕಂತು ತೀರಿತೇ? ಅಥವಾ 40% ಕಮಿಷನ್ನಲ್ಲಿ ಹೈಕಮಾಂಡ್ ಪಾಲು ತಲುಪಿಸಲು ವಿಫಲರಾದ್ರಾ?
ಹಿಂದೆ ಸಿ ಟಿ ರವಿ, ಅಶ್ವತ್ಥನಾರಾಯಣ R ಅಶೋಕ್ ಉಮೇಶ್ ಕತ್ತಿ. ಬಸವನಗೌಡ ಪಾಟೀಲ್ ಯತ್ನಾಳ್ ಅವರುಗಳು ಸಿಎಂ ಆಸೆಯನ್ನು ಬಿಚ್ಚಿಟ್ಟಿದ್ದರು. ಈಗ ಬಿಜೆಪಿ ಮಾಜಿ ಶಾಸಕ ಸುರೇಶ್ ಗೌಡ ಸಿಎಂ ಬದಲಾವಣೆಯ ಸುದ್ದಿಗೆ ಅಧಿಕೃತ ಮುದ್ರೆ ಒತ್ತಿದ್ದಾರೆ. ಜನೋತ್ಸವ ಮಾಡಲಾಗದ ಬೊಮ್ಮಾಯಿ ಅವರು ಈಗ ಆತಂಕೋತ್ಸವ ಮಾಡುತ್ತಿದ್ದಾರೆ.
ಬೊಮ್ಮಾಯಿಯವರ ಆಡಳಿತದಲ್ಲಿ ‘ಆಕ್ಷನ್’ ಇಲ್ಲದಕ್ಕೆ ಸಿಎಂ ಬದಲಾವಣೆಯ ‘ರಿಯಾಕ್ಷನ್’ ಸೃಷ್ಟಿಯಾಗಿದೆ! ಪ್ರವೀಣ್ ಹತ್ಯೆ, ಕಾರ್ಯಕರ್ತರ ರಾಜೀನಾಮೆ, ಬಲಪಂತೀಯ ಸಂಘಟನೆಗಳ ಆಕ್ರೋಶ, ಗೃಹಸಚಿವರ ಮನೆ ಮೇಲೆ ದಾಳಿ, ಎಲ್ಲವೂ BJP4Karnataka ಒಳಗಿನ ಅತೃಪ್ತ ಆತ್ಮಗಳ ಕುರ್ಚಿ ಕಸಿಯುವ ಪೂರ್ವನಿಯೋಜಿತ ಕೃತ್ಯಗಳಾಗಿರಬಹುದೇ ಬೊಮ್ಮಾಯಿ ಅವರೇ?
ಸಿದ್ದರಾಮಯ್ಯನವರ ಅಮೃತ ಮಹೋತ್ಸವದಲ್ಲಿ ಕಾಂಗ್ರೆಸ್ಗೆ ಸಿಕ್ಕ ಅಭೂತಪೂರ್ವ ಜನಬೆಂಬಲ, ಕಾಂಗ್ರೆಸ್ ಆಯೋಜಿಸಿರುವ FreedomMarch ಗೆ ಸಿಗುತ್ತಿರುವ ಅಪರಿಮಿತ ಯಶಸ್ಸನ್ನು ಕಂಡ ಬಿಜೆಪಿ ಕಂಗಾಲಾಗಿ ಹೋಗಿದೆ. ಚುನಾವಣೆಗೆ ಹೋಗಲು ಮುಖವಿಲ್ಲದ ಕಾರಣ ಸಿಎಂ ಕುರ್ಚಿಯಲ್ಲಿ ಬೇರೆ PuppetCM ಕೂರಿಸಲು ಕಸರತ್ತು ನಡೆಸುತ್ತಿದೆ. ಎಂದು ಕರ್ನಾಟಕ ಕಾಂಗ್ರೆಸ್ ಸರಣಿ ಟ್ವೀಟ್ ಮಾಡಿ ಬಿಜೆಪಿಯನ್ನ ಛೇಡಿಸಿದೆ.
ಇದನ್ನೂ ಓದಿ : Nitish Kumar – ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಇಂದು ಪ್ರಮಾಣ ವಚನ ಸ್ವೀಕಾರ…








