ಮಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಕುಡುಪು ಪೆದಮಲೆ ಗ್ರಾಮದ ನಿವಾಸಿ ನಿಶಾಂತ್ ಶೆಟ್ಟಿ ಎಂಬ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನಿಂದ 1.50 ಲಕ್ಷ ರೂ. ಮೌಲ್ಯದ 6 ಕೆ.ಜಿ ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. ಆರೋಪಿ ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಗಾಂಜಾ ತಂದು ಸಣ್ಣ ಸಣ್ಣ ಪ್ಯಾಕೆಟ್ ಮಾಡಿಕೊಂಡು ಮಂಗಳೂರು ನಗರದಲ್ಲಿ ಮಾರಾಟ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ. ಉಳ್ಳಾಲ ತಾಲೂಕಿನ ತೊಕ್ಕೊಟ್ಟು ಒಳಪೇಟೆಯಲ್ಲಿ ಗೂಡ್ಸ್ ಟೆಂಪೋದಲ್ಲಿ ಗಾಂಜಾ ಸಾಗಿಸುವ ಸಂದರ್ಭದಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಅಧಿಕಾರಿಗಳು 9.11 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯ ವಿರುದ್ಧ ಈಗಾಗಲೇ ಹಲ್ಲೆ, ಕಳ್ಳತನ ಪ್ರಕರಣ ಸೇರಿದಂತೆ ಒಟ್ಟು 10ಕ್ಕೂ ಅಧಿಕ ಕಡೆ ಪ್ರಕರಣಗಳು ದಾಖಲಾಗಿದ್ದವು.