ಕೊಪ್ಪಳ: ಅಂಗನವಾಡಿ ಕಾರ್ಯಕರ್ತೆಯೊಬ್ಬರು ಮಕ್ಕಳ ತಟ್ಟೆಗೆ ಮೊಟ್ಟೆ ಹಾಕಿ ಮತ್ತೆ ಕಸಿದುಕೊಂಡಿರುವ ಘಟನೆ ನಡೆದಿದೆ.
ಮಕ್ಕಳಿಗೆ ಪೌಷ್ಟಿಕ ಆಹಾರ ಸಿಗಬೇಕು ಎಂಬ ಕಾರಣಕ್ಕೆ ಸರ್ಕಾರ ಅಂಗನವಾಡಿ ಮಕ್ಕಳಿಗೆ (Anganwadi childrens) ನಿತ್ಯ ಉಪಾಹಾರದೊಂದಿಗೆ ಮೊಟ್ಟೆ ನೀಡಲಾಗುತ್ತಿದೆ. ಆದರೆ, ಅಂಗನವಾಡಿ ಮಕ್ಕಳಿಗೆ ಕೊಡುವ ಮೊಟ್ಟೆಯಲ್ಲೂ (Egg) ವಂಚನೆ ಎಸಗಿರುವ ಆರೋಪ ಕೊಪ್ಪಳ (Koppal) ಜಿಲ್ಲೆಯಲ್ಲಿ ಕೇಳಿ ಬಂದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಕರ್ತೆ ಲಕ್ಷ್ಮಿ, ಸಹಾಯಕಿ ಶೈನಜಾಬೇಗಂ ಅವರನ್ನು ಅಮಾನತು ಮಾಡಲಾಗಿದೆ. ಜಿಲ್ಲೆಯ ಕಾರಟಗಿ ತಾಲೂಕಿನ ಗುಂಡೂರು ಗ್ರಾಮದ ಗ್ರಾಮದ 2ನೇ ಅಂಗನವಾಡಿ ಕೇಂದ್ರದಲ್ಲಿ ಘಟನೆ ನಡೆದಿದ್ದು, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಇಬ್ಬರನ್ನೂ ಅಮಾನತುಗೊಳಿಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಆದೇಶ ಹೊರಡಿಸಿದ್ದಾರೆ.
ಮಕ್ಕಳಿಗೆ ಮೊಟ್ಟೆ ಕೊಟ್ಟು ಫೋಟೋ ಕ್ಲಿಕ್ಕಿಸಿ, ಮಕ್ಕಳು ಬಾಯಿಗಿಡುವ ಮುನ್ನವೇ ಮೊಟ್ಟೆ ಕಸಿದುಕೊಂಡಿದ್ದಾರೆ. ಈ ಅಮಾನವೀಯ ಘಟನೆ ವೀಡಿಯೋದಲ್ಲಿ ಸೆರೆಯಾಗಿದೆ. ಈ ಕೃತ್ಯದ ವಿಡಿಯೋ ವೈರಲ್ ಆಗುತ್ತಿದ್ದಂತೆ ಕಾರ್ಯಕರ್ತೆ, ಸಹಾಯಕಿಯನ್ನು ಅಮಾನತು ಮಾಡಲಾಗಿದೆ. ಈ ಘಟನೆಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.