ತಮಿಳು ನಟ ಸೂರ್ಯ(Surya) ಶೂಟಿಂಗ್ ಸಂದರ್ಭದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಂಗುವ ಚಿತ್ರದ ಶೂಟಿಂಗ್ ಸಂದರ್ಭದಲ್ಲಿ ಭುಜದ ಮೇಲೆ ಕ್ಯಾಮೆರಾ ಬಿದ್ದ ಕಾರಣ ತೀವ್ರವಾದ ಗಾಯಗಳಾಗಿವೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೀಗಾಗಿ ಅಭಿಮಾನಿಗಳು ಆತಂಕ ವ್ಯಕ್ತಪಡಿಸುವಂತಾಗಿದೆ.
ಈ ಕುರಿತು ಸ್ವತಃ ಸೂರ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದು, ಆತಂಕ ಪಡುವ ಅಗತ್ಯವಿಲ್ಲ. ಚೇತರಿಸಿಕೊಳ್ಳುತ್ತಿದ್ದೇನೆ. ಹಾರೈಸಿದ ನಿಮ್ಮೆಲ್ಲರಿಗೂ ಧನ್ಯವಾದಗಳು. ಆದಷ್ಟು ಬೇಗ ಮತ್ತೆ ಚಿತ್ರೀಕರಣದಲ್ಲಿ ಭಾಗಿ ಆಗುತ್ತೇನೆ ಎಂದು ಅವರು ಬರೆದುಕೊಂಡಿದ್ದಾರೆ.
‘ಕಂಗುವ’ (Kanguva) ಸಿನಿಮಾ 38 ಭಾಷೆಗಳಲ್ಲಿ ರಿಲೀಸ್ ಮಾಡುವುದಾಗಿ ಚಿತ್ರತಂಡ ಘೋಷಿಸಿದೆ. 3 ಡಿ ತಂತ್ರಜ್ಞಾನದಲ್ಲೂ ಈ ಸಿನಿಮಾವನ್ನು ನೋಡಬಹುದಾಗಿದೆ. ಈ ಸಿನಿಮಾದ ಶೂಟಿಂಗ್ ಇನ್ನೂ ಕಂಪ್ಲೀಟ್ ಆಗಿಲ್ಲ. ಆಗಲೇ ಭರ್ಜರಿ ವ್ಯಾಪಾರ ಕೂಡ ಆರಂಭಿಸಿದೆ. ಹೆಚ್ಚಿನ ಮೊತ್ತಕ್ಕೆ ಓಟಿಟಿಗೆ ಸೇಲ್ ಆಗುವ ಮೂಲಕ ಸಂಭ್ರಮವನ್ನು ಇಮ್ಮಡಿಗೊಳಿಸಿದೆ.