ಬೀದರ್: ಸವಾರ್ಂಗೀಣ ಅಭಿವೃದ್ಧಿಗೆ ಕಾರ್ಯಕ್ರಮ ಹಾಕಿಕೊಂಡು, ಕರ್ನಾಟಕವನ್ನು ರಾಷ್ಟ್ರದಲ್ಲೇ ಮಾದರಿ ರಾಜ್ಯವಾಗಿ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ.
ಬೀದರ್ ನಗರದಲ್ಲಿ 20 ಕೋಟಿ ರೂಪಾಯಿ ವೆಚ್ಚದಲ್ಲಿ 100 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆರೈಕೆ ಆಸ್ಪತ್ರೆ ಹಾಗೂ ಇನ್ನಿತರ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ ಬಿಎಸ್‍ವೈ, ಕೋವಿಡ್, ಪ್ರವಾಹ, ಅತಿವೃಷ್ಟಿ, ಹಣಕಾಸಿನ ಸಮಸ್ಯೆಗಳಿಂದ ಈ ವರ್ಷ ನಿರೀಕ್ಷೆಯಂತೆ ಗುರಿ ಮುಟ್ಟಲಾಗಿಲ್ಲ. ಮುಂದಿನ ದಿನಗಳಲ್ಲಿ ಬೀದರ್ ಜಿಲ್ಲೆ ಸೇರಿದಂತೆ ರಾಜ್ಯದ ಅಭಿವೃದ್ಧಿಗೆ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ರಾಜ್ಯ ಸರ್ಕಾರ ಎಲ್ಲರಿಗೂ ಆರೋಗ್ಯ ಸೇವೆ ನೀಡಲು ಬದ್ಧವಾಗಿದ್ದು, ಮುಂದಿನ 5 ವರ್ಷದಲ್ಲಿ ರಾಜ್ಯ ಸರ್ಕಾರ 125 ತಾಯಿ ಮತ್ತು ಮಕ್ಕಳ ಆರೈಕೆ ಆಸ್ಪತ್ರೆ ತೆರೆಯುವ ಗುರಿ ಹೊಂದಿದೆ ಎಂದು ಅವರು ಘೋಷಿಸಿದರು.
ಇದೀಗ ಉದ್ಘಾಟನೆಗೊಂಡಿರುವ ನೂರು ಹಾಸಿಗೆಗಳ ಆಸ್ಪತ್ರೆ ಅತ್ಯಾಧುನಿಕ ಆಸ್ಪತ್ರೆಯಾಗಿದ್ದು, 24 ಗಂಟೆಯೂ ತಾಯಿ ಮತ್ತು ಮಕ್ಕಳ ಆರೈಕೆ ಮಾಡುತ್ತದೆ. ಈ ನಿಟ್ಟಿನಲ್ಲಿ ಪರಿಣಿತ ವೈದ್ಯರ ತಂಡ ಈ ಆಸ್ಪತ್ರೆಯಲ್ಲಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಗರ್ಭಿಣಿ ಮತ್ತು ನವಜಾತ ಶಿಶುಗಳ ಮರಣಗಳ ಅನುಪಾತ ತಗ್ಗಿಸುವುದು ಹಾಗೂ ಗರ್ಭಿಣಿ ಹಾಗೂ ಮಕ್ಕಳಿಗೆ ಉತ್ತಮ ಗುಣಮಟ್ಟದ ಸೇವೆ ನೀಡಬೇಕೆಂಬುದು ಎಲ್ಲರ ಆಶಯವಾಗಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಅವರು ಕರೆ ನೀಡಿದರು.
2018ರ ನೀತಿ ಆಯೋಗದ ಶ್ರೇಯಾಂಕದ ಪ್ರಕಾರ ಕೇರಳ ಮತ್ತು ತಮಿಳುನಾಡು ಬಿಟ್ಟರೆ ಕರ್ನಾಟಕ ಅತ್ಯುತ್ತಮ ಆರೋಗ್ಯ ಸೇವೆ ನೀಡುವ ರಾಜ್ಯ ಎಂದು ಹೆಮ್ಮೆಯಿದೆ. ದೇಶದ ಆರೋಗ್ಯ ಕ್ಷೇತ್ರದ ಸರಾಸರಿ ಅಂಕಕ್ಕಿಂತ ರಾಜ್ಯದ ಸರಾಸರಿ ಅಂಕ ಹೆಚ್ಚಿದೆ ಎಂದು ಅವರು ಹೇಳಿದರು.
ಇಲ್ಲಿ ಜನಿಸಿದ ಶರಣ ಸಂಸ್ಕøತಿಯೂ ಇಡೀ ವಿಶ್ವಕ್ಕೆ ಪಸರಿಸಿ ಈ ನೆಲದ ಮಹತ್ವ ಸಾರಿದೆ ಎಂದು ಬಣ್ಣಿಸುವ ಮೂಲಕ ಶರಣರು-ಸಂತರನ್ನು ಹಾಡಿಹೊಗಳಿದರು.

ಆರೋಗ್ಯ ಸಚಿವ ಡಾ. ಸುಧಾಕರ್ ಅವರು ಮಾತನಾಡಿ, ಇಂದು ಖಾಸಗಿ ಆಸ್ಪತ್ರೆಗಳು ಬಡವರಿಗೆ ತುಟ್ಟಿಯಾಗಿ ಪರಿಣಮಿಸಿವೆ. ಪರಿಣಿತ ವೈದ್ಯರನ್ನೊಳಗೊಂಡಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಬಡವರಿಗೆ ಪೂರಕವಾಗಿದೆ ಎಂದು ಅವರು ಹೇಳಿದರು.
2008ರಲ್ಲಿ ಅಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 20 ಕೋಟಿ ರೂಪಾಯಿ ವೆಚ್ಚದಲ್ಲಿ ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿಸಿದ್ದು, ಇಂದು ಅವರೇ ಉದ್ಘಾಟಿಸುತಿರುವುದು ಸಂತಸ ತಂದಿದೆ ಎಂದರು.
ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಇಲಾಖೆಗೆ 2500 ವೈದ್ಯರನ್ನು ನೇಮಕ ಮಾಡಿಕೊಳ್ಳುತ್ತಿದ್ದು, ಮುಂದಿನ 15 ದಿನಗಳಲ್ಲಿ ಪ್ರಕ್ರಿಯೆ ಮುಗಿಯಲಿದೆ ಎಂದು ಅವರು ತಿಳಿಸಿದರು.
ಇದೇ ಸಂದರ್ಭದಲ್ಲಿ ಬೀದರ್ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಜಮೀಸ್ಥಾನಪುರ ಉಪಪ್ರಾಂಗಣದಲ್ಲಿ ಹಮಾಲರಿಗೆ ಮನೆ ನಿರ್ಮಾಣಕ್ಕಾಗಿ ನಿವೇಶನದ ಹಕ್ಕುಪತ್ರಗಳನ್ನು ಮುಖ್ಯಮಂತ್ರಿಗಳು ವಿತರಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel







