ದೇಶಾದ್ಯಂತ ಸಂಚಲನ ಸೃಷ್ಟಿಸಿರುವ ಸುಶಾಂತ್ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂಬ ಒತ್ತಡಗಳು ಹೆಚ್ಚಾಗಿದೆ. ಇನ್ನೂ ಇದು ಆತ್ಮಹತ್ಯೆಯಲ್ಲ ಕೊಲೆ ಎಂಬ ಅನುಮಾನಗಳು ಬಲವಾಗಿವೆ. ಆದ್ರೆ ಮಹಾರಾಷ್ಟ್ರ ಸರ್ಕಾರ ಮಾತ್ರ ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವುದಿಲ್ಲ ಎಂದು ಖಡಾಖಂಡಿತವಾಗಿ ಹೇಳಿಬಿಟ್ಟಿದೆ. ಆದ್ರೆ ಇದೆಲ್ಲದರ ನಡುವೆ ಸುಶಾಂತ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಮುಂಬೈ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದ್ದು, ನ್ಯಾಯಾಲಯದಲ್ಲಿ ಈ ಸಂಬಂಧ ಇಂದು ವಿಚಾರಣೆ ನಡೆಯಲಿದೆ.
ಮುಖ್ಯ ನ್ಯಾಯಮೂರ್ತಿ ದೀಪಂಕರ್ ದತ್ತ ನೇತೃತ್ವದ ನ್ಯಾಯಪೀಠ ಈ ವಿಚಾರಣೆ ನಡೆಸಲಿದೆ. ಸುಶಾಂತ್ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಸಮೀತ್ ಥಕ್ಕರ್ ಎಂಬುವವರು ತಮ್ಮ ಲಾಯರ್ ರಸ್ಪಾಲ್ ಸಿಂಗ್ ರೇಣು ಎಂಬುವವರ ಮೂಲಕ ಪಿಐಎಲ್ ಸಲ್ಲಿಸಿದ್ದರು.